ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪ| ಮುರುಘಾ ಶ್ರೀ ಜಾಮೀನು ಅರ್ಜಿ ವಜಾ; ಜೈಲುವಾಸ ಕಂಟಿನ್ಯೂ…

ಸಮಗ್ರ ನ್ಯೂಸ್: ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪದಡಿ ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಇದರಿಂದ ಮುರಾಘ ಶ್ರೀಗಳ ಜೈಲುವಾಸ ಮತ್ತೆ ಮುಂದುವರೆದಿದೆ. ಚಿತ್ರದುರ್ಗ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

Ad Widget ... ..

ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸದ್ಯ ಶಿವಮೊಗ್ಗದ ಮೆಗ್ಗಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆಪ್ಟೆಂಬರ್ 19ಕ್ಕೆ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಚಿತ್ರದುರ್ಗ ಕೋರ್ಟ್, ತೀರ್ಪನ್ನು ಸೆಪ್ಟೆಂಬರ್ 23ಕ್ಕೆ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಸೆಪ್ಟೆಂಬರ್ 27ಕ್ಕೆ ಅಂತ್ಯವಾಗಲಿದೆ.

Ad Widget

Leave a Comment

Your email address will not be published. Required fields are marked *