ಭಟ್ಕಳ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿರುವ ಘಟನೆ ಭಟ್ಕಳ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉನೈಜ್ ಹಮ್ಜದ ಖತೀಬ್ (20) ರಂಗಿನಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ.

. Ad Widget . Ad Widget . Ad Widget

ಈತ ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಕಾರು ಚಲಾಸಿಕೊಂಡು ಬರುತ್ತಿರುವಾಗ ದುರ್ಘಟನೆ ಸಂಭವಿಸಿದೆ. ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯ ಬಲ ಭಾಗಕ್ಕೆ ಹೋಗಿ ರಸ್ತೆಯ ಮಧ್ಯದಲ್ಲಿರುವ ಡಿವೈಡರಗೆ ಡಿಕ್ಕಿ ಹೊಡೆದಿದೆ.

. Ad Widget .

ಪರಿಣಾಮ ಕಾರು ಪಲ್ಟಿಯಾಗಿದ್ದು ಕಾರಿನ ಚಾಲಕ ಸಾವನಪ್ಪಿದ್ದು, ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *