Ad Widget .

ಮಂಗಳೂರು: ಹಾಸ್ಟೆಲ್ ನಿಂದ‌ ಪರಾರಿಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

ಸಮಗ್ರ ನ್ಯೂಸ್ : ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.

Ad Widget . Ad Widget .

ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಓರ್ವ ವಿದ್ಯಾರ್ಥಿನಿ ನಿಗೂಢವಾಗಿ ಕಾಣೆಯಾಗಿದ್ದರು. ಘಟನೆ ಸಂಬಂಧ ಕಂಕನಾಡಿಯ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

Ad Widget . Ad Widget .

ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ ಪೊಲೀಸರು ಬಳಿಕ ಸ್ವೀಕಾರ ಕೇಂದ್ರಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *