Ad Widget .

ಮೈಸೂರು ದಸರಾ ಹಿನ್ನಲೆ| ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಹದ್ದಿನಕಣ್ಣು – ಕಮಿಷನರ್ ಡಾ.ಚಂದ್ರಗುಪ್ತ

ಸಮಗ್ರ ನ್ಯೂಸ್: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸೆ.26ರಿಂದ ಅ.5ರವರೆಗೆ ನಡೆಯಲಿದ್ದು, ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.

Ad Widget . Ad Widget .

ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಮೈಸೂರು ನಗರ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತಿದೆ. ಮೈಸೂರು ನಗರದಿಂದ 1255, ಹೊರಜಿಲ್ಲೆಗಳಿಂದ 3580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, 650 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5485 ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್ ಗೆ ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಮೊಬೈಲ್ ಕಮಾಂಡ್ ಸೆಂಟರ್ ಬಸ್ ನ್ನು ದಸರಾ ಮಹೋತ್ಸವದಲ್ಲಿ ಬಳಕೆ ಮಾಡಲಾಗುತ್ತಿದೆ. ಈ ಬಸ್ಸಿನಲ್ಲಿ ಸಿಸಿಟಿವಿ ವ್ಯವಸ್ಥೆ ಇದ್ದು ಬಾಡಿ ಪೋರ್ಸ್ ಕ್ಯಾಮರಾಗಳು, ಲಾಂಗ್ ಡಿಸ್ಟೆನ್ಸ್ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಗಳನ್ನು ತೆಗೆಯುವ ವ್ಯವಸ್ಥೆ ಇರಲಿದೆ ಎಂದರು.

Ad Widget . Ad Widget .

ಅರಮನೆ ಮತ್ತು ಬನ್ನಿ ಮಂಟಪದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿಪೋರ್ಸ್ ಕ್ಯಾಮರಾ ವಿತರಿಸಲಾಗುತ್ತದೆ. ಅಲ್ಲಿನ ಸಂಪೂರ್ಣ ದೃಶ್ಯಾವಳಿ ಈ ಕ್ಯಾಮರಾಗಳಲ್ಲಿ ಮತ್ತು ಮೊಬೈಲ್ ಕಮಾಂಡ್ ಸೆಂಟರ್ ನಲ್ಲಿ ರೆಕಾರ್ಡ್ ಆಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮರಾಗಳಿಂದ ಕಣ್ಗಾವಲು ಮಾಡಲಾಗುವುದು.

ದಸರಾ ಪ್ರಮುಖ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಪ್ಲಾಟ್ ಫಾರ್ಮ್ ಗಳನ್ನು ನಿರ್ಮಿಸಿ ಅದರ ಮೇಲೆ ಪೊಲೀಸರನ್ನು ಮೆಗಾ ಫೋನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಅಪರಾಧಗಳನ್ನು ತಡೆಗಟ್ಟಲು ಅಕ್ಕಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *