Ad Widget .

ಎರಡು ದಿನಗಳಿಂದ 108 ಆಂಬುಲೆನ್ಸ್ ಸೇವೆಗೆ ಕರೆ ಮಾಡಿದರೆ ಸ್ಪಂದಿಸುತ್ತಿಲ್ಲ, ಜನರ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಆರೋಗ್ಯ ಇಲಾಖೆ 108 ಆಂಬುಲೆನ್ಸ್ ಸೇವೆ ಬಂದ್ ಆಗಿದೆ ಎಂಬ ಮಾತು ಕೇಳಿಬರುತ್ತಿವೆ.

Ad Widget . Ad Widget .

ಯಾವುದೋ ತಾಂತ್ರಿಕ ದೋಷದಿಂದಾಗಿ 108 ಗೆ ಕರೆ ಮಾಡಿದರೂ ಯಾರೂ ಸಹ ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ತಿಳಿದುಬಂದಿದೆ.

Ad Widget . Ad Widget .

ಜಿವಿಕೆ ಏಜನ್ಸಿ ಮೂಲಕ 108 ಆಂಬುಲೆನ್ಸ್ ಸೇವೆ ನಡೆಯುತ್ತಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ತುರ್ತು ಸೇವೆ ಬಂದ್ ಆಗಿದೆ.

ಎರಡು ದಿನಗಳಿಂದ ಈ ಸಮಸ್ಯೆಯಾಗಿದ್ದರೂ ಆರೋಗ್ಯ ಇಲಾಖೆಯಾಗಲಿ, ಸರ್ಕಾರವಾಗಲಿ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಆಂಬುಲೆನ್ಸ್ ಗೆ ಕರೆ ಮಾಡಿದರೂ ಯಾರೂ ಕರೆಗಳನ್ನೇ ಸ್ವೀಕರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

108 ಕಾಲ್ ಸೆಂಟರ್ ಗೆ ಪ್ರತಿದಿನ 9-10 ಸಾವಿರ ಕರೆಗಳು ಬರುತ್ತಿದ್ದವು ಆದರೆ ಈಗ ಕೇವಲ 2-3 ಸಾವಿರ ಕರೆಗಳನ್ನು ಮಾತ್ರ ಸಿಬ್ಬಂದಿಗಳು ಸ್ವೀಕರಿಸುತ್ತಿದ್ದಾರೆ ಎನ್ನಲಾಗಿದೆ.

ಇದು ಟೆಕ್ನಿಕಲ್ ಸಮಸ್ಯೆಯೇ ಅಥವಾ ಬೇರೆಯದ್ದೇ ಕಾರಣಗಳಿವೆಯೇ ಎಂಬ ಜನರಿಗೆ ಅನುಮಾನಗೊಂಡಿದೆ.

Leave a Comment

Your email address will not be published. Required fields are marked *