ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಹಾವು ಕಡಿದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಶಿವನೂರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ 10ನೇ ತರಗತಿ ವಿದ್ಯಾರ್ಥಿನಿ ದೀಪಾ ಅಪ್ಪಾಸಾಬ ಮೇತ್ರಿ ಹಾವು ಕಚ್ಚಿ ಸಾವನ್ನಪ್ಪಿದ್ದ ದುರ್ದೈವಿ.

. Ad Widget . Ad Widget

ಶನಿವಾರ ಶಾಲೆ ಮುಗಿಸಿ ಮನೆಗೆ ಬಂದು ಮನೆಯಲ್ಲಿ ಮಲಗಿದಾಗ ಹಾವು ಕಚ್ಚಿದೆ. ತಕ್ಷಣ ಎಚ್ಚರಗೊಂಡು ಗಮನಿಸಿದಾಗ ಮನೆಯವರಿಗೆ ಹಾವು ಕಚ್ಚಿರುವ ವಿಷಯ ಗೊತ್ತಾಗಿದೆ. ನಂತರ ಚಿಕಿತ್ಸೆ ಕರೆದುಕೊಂಡು ಹೋಗುವ ಸಮಯದಲ್ಲಿ ನಡುದಾರಿಯಲ್ಲಿ ದಾರಿಯಲ್ಲಿ ಸಾವನ್ನಪ್ಪಿದ್ದು ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

. Ad Widget . . Ad Widget . Ad Widget

Leave a Comment

Your email address will not be published. Required fields are marked *