Ad Widget .

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್.ಎಂ.ಕೃಷ್ಣ ಅವರು ತೀವ್ರ ಜ್ವರ, ಶ್ವಾಸಕೋಶ ಇನ್​ಫೆಕ್ಷನ್​ನಿಂದ ಬಳಲುತ್ತಿದ್ದಾರೆ. ಮೊದಲು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ರಾತ್ರಿ ಮಣಿಪಾಲ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಡಾ.ಸತ್ಯನಾರಾಯಣ್​, ಡಾ.ಸುನೀಲ್​ ಕಾರಂತ್​ ತಂಡ ಚಿಕಿತ್ಸೆ ನೀಡುತ್ತಿದೆ.

Ad Widget . Ad Widget .

ಶನಿವಾರ ರಾತ್ರಿಯೇ ಮಣಿಪಾಲ್​ ಆಸ್ಪತ್ರೆಗೆ ಎಸ್​.ಎಂ.ಕೃಷ್ಣ ಅವರನ್ನು ಸ್ಥಳಾಂತರಿಸಲಾಗಿದ್ದು, ರಾತ್ರಿಯಿಡೀ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್​ ಅವರೂ ಎಸ್​ಎಂಕೆ ಆರೋಗ್ಯದ ಬಗ್ಗೆ ನಿಗಾವಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಶಾಸಕ ಡಾ.ಎಚ್​.ಡಿ.ರಂಗನಾಥ್​ ಕೂಡ ಆಸ್ಪತ್ರೆಯಲ್ಲೇ ಇದ್ದರು. ತೀವ್ರ ನಿಗಾ ಘಟಕದಲ್ಲಿ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

Ad Widget . Ad Widget .

Leave a Comment

Your email address will not be published. Required fields are marked *