ಶಿರಾಡಿ: ಕೆ.ಎಸ್.ಆರ್.ಟಿ.ಸಿ ಹಾಗೂ ಕಾರು ನಡುವೆ ಡಿಕ್ಕಿ; ಪ್ರಯಾಣಿಕರು ಜಖಂ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

Ad Widget ... ..

ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್, ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಶಿರಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Ad Widget

Leave a Comment

Your email address will not be published. Required fields are marked *