Ad Widget .

ಉಡುಪಿ: ಹೂಡೆ ಬೀಚ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು; ಮತ್ತೋರ್ವ ನಾಪತ್ತೆ

ಸಮಗ್ರ ನ್ಯೂಸ್: ಹೂಡೆ ಸಮೀಪದ ಬೀಚ್‌ನಲ್ಲಿ ರವಿವಾರ ಸಂಜೆ ನೀರಿನಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಓರ್ವ ಸಮುದ್ರಪಾಲಾಗಿರುವ ಬಗ್ಗೆ ವರದಿಯಾಗಿದೆ.

Ad Widget . Ad Widget .

ಮೃತರನ್ನು ಬೆಂಗಳೂರಿನ ನಿಶಾಂತ್ (21) ಹಾಗೂ ಷಣ್ಮುಗ (21) ಎಂದು ಗುರುತಿಸಲಾಗಿದೆ.ಇನ್ನೋರ್ವ ವಿದ್ಯಾರ್ಥಿ ಶ್ರೀಕರ್ (21) ಎಂಬವರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಇವರೆಲ್ಲರು ಮಣಿಪಾಲದ ಐಸಿಎಎಸ್ ವಿದ್ಯಾರ್ಥಿಗಳಾಗಿದ್ದಾರೆ.

Ad Widget . Ad Widget .

ವಾರಾಂತ್ಯ ಹಿನ್ನೆಲೆಯಲ್ಲಿ ಮಣಿಪಾಲದ ಸುಮಾರು 15 ಮಂದಿ ವಿದ್ಯಾರ್ಥಿಗಳು ಹೂಡೆ ಬೀಚ್‌ನಲ್ಲಿ ವಿಹಾರಕ್ಕೆಂದು ಬಂದಿದ್ದರು. ಅಲ್ಲಿ ಕೆಲವರು ಸಮುದ್ರದ ನೀರಿನಲ್ಲಿ ಆಡುತ್ತಿದ್ದ ವೇಳೆ ಮೂವರು ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಕೊಂಡು ಹೋದರು. ಅದರಲ್ಲಿ ಇಬ್ಬರನ್ನು ರಕ್ಷಿಸಿ ಮೇಲಕ್ಕೆ ತರಲಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಇನ್ನೋರ್ವ ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *