Ad Widget .

ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್
7 ಮಂದಿ ದುರ್ಮರಣ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾನುವಾರ ರಾತ್ರಿ ಟೂರಿಸ್ಟ್ ಟೆಂಪೋ ಟ್ರಾವೆಲರ್ ಕಂದಕಕ್ಕೆ ಬಿದ್ದು, 7 ಮಂದಿ ಸಾವನ್ನಪ್ಪಿದ್ದು ಹಾಗೂ 10 ಜನರು ಗಾಯಗೊಂಡ ಘಟನೆ ಸಂಭವಿಸಿದೆ.

Ad Widget . Ad Widget .

ಘಟನೆ ಹಿಮಾಚಲ ಪ್ರದೇಶದ ಕುಲುವಿನ ಜಲೋಡಿ ಪಾಸ್ ಬಳಿ ನಡೆದಿದೆ. ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದು, ರಾತ್ರಿ 8:30ರ ಸುಮಾರಿಗೆ ದುರ್ಘಟನೆ ನಡೆದಿದೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಮಧ್ಯರಾತ್ರಿ ಸುಮಾರು 1:37ರ ಹೊತ್ತಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

Ad Widget . Ad Widget .

ವರದಿಗಳ ಪ್ರಕಾರ ಟೂರಿಸ್ಟ್ ವಾಹನದಲ್ಲಿದ್ದವರು ವಾರಣಾಸಿಯ ವಿದ್ಯಾರ್ಥಿಗಳಾಗಿದ್ದು, ಶೈಕ್ಷಣಿಕ ಪ್ರವಾಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಎಲ್ಲಾ ಗಾಯಾಳುಗಳಿಗೆ ಕುಲುವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Comment

Your email address will not be published. Required fields are marked *