ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ತಾಳಿಕೋಟೆಯ ಕ್ರೀಡಾಪಟು ನವೀನಕುಮಾರ ಸಂಗಪ್ಪ ಈಜೇರಿ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಈಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ಆಟ ಪ್ರದರ್ಶನ ನೀಡುವ ಮೂಲಕ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಉತ್ತರಪ್ರದೇಶದ ಲಕ್ಕೋದ ಕೆ.ಡಿ.ಸಿಂಗ್ ಸ್ಟೇಡಿಯಂನಲ್ಲಿ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.