ಸಮಗ್ರ ನ್ಯೂಸ್: ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದೆ.
ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಕ್ಷಣ ಫರಾನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿರುವ ಜನರನ್ನು ಎಪಿಎಂಸಿ ಪೊಲೀಸರು ಚದುರಿಸುತ್ತಿದರು. ಲಾಠಿ ಹಿಡಿದು ಕುಟುಂಬಸ್ಥರು ಹಾಗೂ ಸಂಬಂಧಿಕರನ್ನ ಹೊರಗೆ ಕಳುಹಿಸಿದರು.
ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣಗೊಂಡಿದ್ದು, ಸ್ಥಳಕ್ಕೆ ಡಿಸಿಪಿ ಸ್ನೇಹಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀಮ್ಸ್ ಆಸ್ಪತ್ರೆ ಆವರಣದಲ್ಲಿ ಎಪಿಎಂಸಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.