Ad Widget .

ಸಿಎಂ‌ ಬೊಮ್ಮಾಯಿ ಮೇಲೆ ಬಿ ಎಸ್ ವೈ ಒತ್ತಡ‌ ಹೇರಬೇಕು: ಜಯಮೃತ್ಯುಂಜಯ ಸ್ವಾಮೀಜಿ

ಸಮಗ್ರ ನ್ಯೂಸ್: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

Ad Widget . Ad Widget .

ಅವರು ಅಥಣಿಯಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ.

Ad Widget . Ad Widget .

ಕಳೆದ ವಾರ ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕೆಂದು ಧ್ವನಿ ಕೂಡಿಸಿದ್ದಾರೆ. ಆದರೆ ಸದನದಲ್ಲಿ ಮಾತನಾಡಿ ಅಷ್ಟಕ್ಕೇ ಸುಮ್ಮನಾಗಬಾರದು, ಬಿಎಸ್ ವೈ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಜಯ ಮೃತ್ಯುಂಜಯ ಸ್ವಾಮೀಜಿ ಬಿಎಸ್ ವೈ ಅವರಿಗೆ ಸಲಹೆ ನೀಡಿದರು.

Leave a Comment

Your email address will not be published. Required fields are marked *