Ad Widget .

ಕಣ್ಣೂರು: ಏರ್‌ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ| ಮುಂದೇನಾಯಿತು?

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಕಣ್ಣೂರಿನಲ್ಲಿ ಸಂಭವಿಸಿದೆ.

Ad Widget . Ad Widget .

135 ಪ್ರಯಾಣಿಕರಿದ್ದ ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಏರ್‌ ಇಂಡಿಯಾ ಅಧಿಕಾರಿಗಳು ಹೇಳಿದ್ದಾರೆ.

Ad Widget . Ad Widget .

ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ, ತಪಾಸಣೆ ಮತ್ತು ನಿರ್ವಹಣೆಗಾಗಿ ವಿಮಾನವನ್ನು ಇಳಿಸಲಾಯಿತು. ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಹಾಗೂ ವಿಮಾನಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ.

ವಿದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಬೇರೆ ವಿಮಾನಗಳಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು. ದೆಹಲಿಗೆ ತೆರಳಬೇಕಿದ್ದ ಪ್ರಯಾಣಿಕರನ್ನು ಇಲ್ಲಿನ ಹೊಟೇಲ್‌ಗಳಲ್ಲಿ ಇರಿಸಲಾಗಿದ್ದು ಮಂಗಳವಾರ ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ.

Leave a Comment

Your email address will not be published. Required fields are marked *