ಬೆಳ್ಳಂಬೆಳಗ್ಗೆ ಪಿಎಫ್ಐ ಮುಖಂಡರಿಗೆ ಬೆಳಗಾವಿ ಪೊಲೀಸರಿಂದ ಶಾಕ್| ಐವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ

ಸಮಗ್ರ ನ್ಯೂಸ್: ಬೆಳ್ಳಂಬೆಳಿಗ್ಗೆ ಐವರು ಪಿಎಫ್ಐ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದ ವಿಚಾರಣೆ ಮಾಡುತ್ತಿದ್ದಾರೆ. ಮಂಗಳವಾರ
ಬೆಳ್ಳಂಬೆಳಗ್ಗೆ 4 ಗಂಟೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಗರದಲ್ಲಿನ ಪಿಎಫ್ಐ ಮುಖಂಡರ ಪಟ್ಟಿ ಮಾಡಿಕೊಂಡು ಅವರ ಮೇಲೆ ರೇಡ್ ಮಾಡಿ ವಶಕ್ಕೆ ಪಡೆದಿದ್ದಾರೆ.

. Ad Widget . Ad Widget . Ad Widget .

ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ ಹಾಗೂ ಎಸಿಪಿ ನಾರಾಯಣ ಭರಮಣಿ, ಸದಾಶಿವ ಕಟ್ಟಿಮನಿ,ಮಾರ್ಕೆಟ್, ಎಪಿಎಂಸಿ, ಟಿಳಕವಾಡಿ, ಮಾಳಮಾರುತಿ ಠಾಣೆ ಸಿಪಿಐಗಳ ಒಳಗೊಂಡ ಪೊಲೀಸ ಟೀಮ್ ಐವರನ್ನು ಪಿಎಫ್ಐ ಮುಖಂಡರನ್ನು
ವಶಕ್ಕೆ ಪಡೆದು ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡುತ್ತಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸಮಾಜದಲ್ಲಿ ಶಾಂತಿ ಕದಡುವ ಕೃತ್ಯಗಳಲ್ಲಿ ಭಾಗಿಯಾದ ಆರೋಪದಡಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇತ್ತೀಚೆಗೆ ಎನ್ಐಎ ದಾಳಿ ಖಂಡಿಸಿ ಅನುಮತಿ ಪಡೆಯದೆ ಪಿಎಫ್ಐ ಕಾರ್ಯಕರ್ತರು ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ ಕಟಗಿ ನೇತೃತ್ವದಲ್ಲಿ ಪುಣೆ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿ ನಾಲ್ಕು ತಡೆದು ಪ್ರತಿಭಟನೆ ನಡೆಸಿದ್ದರು.

Leave a Comment

Your email address will not be published. Required fields are marked *