ರೈತ ಭಾಂದವರಿಗೆ ಶುಭಸುದ್ದಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್!!

ಸಮಗ್ರ ನ್ಯೂಸ್: ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Ad Widget ... ..

ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ಬಳಿಕ ಸಚಿವ ಸುನೀಲ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ರೈತರಿಗೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ, ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಮತ್ತೆ ಹೊಸದಾಗಿ ಐಪಿ ಸೆಕ್ಟರ್​ಗಳಿಗೆ ವಿದ್ಯುತ್ ಸಂಪರ್ಕ ನೀಡುವುದರ ಕುರಿತು ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಣೆ ಮಾಡಬೇಕು. ಅದರಂತೆ ದರ ಪರಿಷ್ಕರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಬಗ್ಗೆ ಒಂದು ಸಲ ಹೆಚ್ಚಾದ್ದಾರೆ ಮತ್ತೊಮ್ಮೆ ದರ ಕಡಿಮೆಯಾಗಲಿದೆ. ಮುಂದೆ ವಿದ್ಯುತ್ ದರ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *