ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕ್ರಿಯೆ ನಡೆಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವ ಮೇಲೆ ಠಾಣೆಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ನಿವಾಸಿ ತೀರ್ಥಪ್ರಸಾದ್(25) ಎಂದು ಗುರುತಿಸಲಾಗಿದೆ.
ಬಾಲಕಿಗೆ ಕಳೆದ 4 ತಿಂಗಳ ಹಿಂದೆ ವಾಟ್ಸಪ್ ಗ್ರೂಪ್ನಲ್ಲಿ ಉಬರಡ್ಕದ ತೀರ್ಥಪ್ರಸಾದ್ ಎಂಬವನ ಪರಿಚಯವಾಗಿದ್ದು, ಬಾಲಕಿಗೆ ತೀರ್ಥಪ್ರಸಾದ್ ಕರೆ ಮಾಡಿ ಇಬ್ಬರು ಪರಸ್ಪರ ಮಾತನಾಡಿಕೊಂಡಿದ್ದು ಜೂ.30 ರಂದು ಸುಳ್ಯಕ್ಕೆ ಬಾ ಮಾತನಾಡಲಿಕ್ಕಿದೆ ಎಂದು ಹೇಳಿದ ಪ್ರಕಾರ ಬಾಲಕಿ ಬಸ್ಸಿನಲ್ಲಿ ಸುಳ್ಯಕ್ಕೆ ಬಂದಿದ್ದು ಸುಳ್ಯ ಬಸ್ಸು ನಿಲ್ದಾಣಕ್ಕೆ ತೀರ್ಥಪ್ರಸಾದ್ ಬಂದು ಆತನ ಬೈಕ್ ನಲ್ಲಿ ಬಾಲಕಿಯನ್ನು ಕುಳ್ಳಿರಿಸಿಕೊಂಡು ಆತನ ಸ್ನೇಹಿತನ ರೂಮ್ಗೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿಯನ್ನಾಗಿಸಿದ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಾಲಕಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.