ಸಮಗ್ರ ನ್ಯೂಸ್: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕರ್ನಾಟಕ ಸೇರಿ 6 ಜಿಲ್ಲೆಗಳಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.
ಪಿಎಫ್‍ಐ ಪ್ರಬಲವಾಗಿರುವ ರಾಜ್ಯಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಮೆಸೇಜ್ ನೀಡಿದ್ದು, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣಕ್ಕೆ ರೆಡ್ ಅಲರ್ಟ್ ನೀಡಿದೆ. ಪ್ರತಿಭಟನೆಗೆ ಅವಕಾಶ ನೀಡಬೇಡಿ, ಗುಂಪು ಸೇರಲು ಅವಕಾಶ ನೀಡದಂತೆ, ಯಾವುದೇ ರೀತಿಯ ಗಲಭೆ ಸೃಷ್ಟಿ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ.