ಲಲಿತಾ ಪಂಚಮಿಯಿಂದ ರಾಜ್ಯದ ಮುಜುರಾಯಿ‌ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸೂಚನೆ

ಸಮಗ್ರ ನ್ಯೂಸ್: ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ.

Ad Widget ... ..

ದಿನಾಂಕ 30:09:2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರ ಮಾಡಿಕೊಂಡು ಲೋಕ ಕಲ್ಯಾಣಾರ್ಥವಾಗಿ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

Ad Widget

ಸೆ.30 ರಂದು ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸಾಧ್ಯವಾಗದೇ ಇದ್ದಲ್ಲಿ ದಿನಾಂಕ 03:10:2022 ರ ಸೋಮವಾರ ದುರ್ಗಾಷ್ಟಮಿಯಂದು ಈ ಕಾರ್ಯಕ್ರಮ ನಡೆಸಬೇಕು ಹಾಗೂ ಇದರ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಲೋಕ ಕಲ್ಯಾಣಕ್ಕಾಗಿ ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *