Ad Widget .

ಮಂಗಳೂರು: PFI ಮತ್ತು CFI ಕಚೇರಿಗಳಿಗೆ ಬೀಗ ಜಡಿದ ಖಾಕಿ ಪಡೆ

ಸಮಗ್ರ ನ್ಯೂಸ್: ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ಪಿಎಫ್ಐ ಸೇರಿದಂತೆ 8 ಸಂಘಟನೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿರುವ ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಕಚೇರಿಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ.

Ad Widget . Ad Widget .

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿ ಮತ್ತು ಬಂದರು ಪ್ರದೇಶದ ಅಝೀಝುದ್ದೀನ್ ರಸ್ತೆಯಲ್ಲಿರುವ ಸಿಎಫ್ಐ ಕಚೇರಿಗಳಲ್ಲಿ ಪರಿಶೀಲನೆ ಮಾಡಿ ಕಚೇರಿಗಳನ್ನು ಬೀಗಮುದ್ರೆ ಜಡಿದಿದ್ದಾರೆ.

Ad Widget . Ad Widget .

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತರು, ಕೇಂದ್ರ ಸರ್ಕಾರ 8 ಸಂಘಟನೆಗಳನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ನಿಷೇಧಿತ ಸಂಘಟನೆಗಳಿಗೆ ಸೇರಿರುವ ಎಲ್ಲಾ ಸ್ಥಳಗಳಲ್ಲಿ ಪರಿಶೀಲನೆ ಮಾಡಿ ಸೀಜ್ ಮಾಡಿ ಸ್ಥಳಗಳನ್ನು ಸೀಲ್ ಮಾಡುವುದಾಗಿ ತಿಳಿಸಿದರು.

Leave a Comment

Your email address will not be published. Required fields are marked *