Ad Widget .

ಪಿಎಫ್ಐ ಬ್ಯಾನ್‌ ಮಾಡಿರುವುದನ್ನು ಸ್ವಾಗತಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್‌ ಸ್ವಾಗತಿಸಿದೆ.

Ad Widget . Ad Widget .

ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ.

Ad Widget . Ad Widget .

ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *