ಸಮಗ್ರ ನ್ಯೂಸ್: ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.
NIA ದೇಶದ 15ಕ್ಕೂ ಹೆಚ್ಚು ರಾಜ್ಯಗಳಲ್ಲಿ ರೇಡ್ ನಡೆಸಿತ್ತು. ಪೊಲೀಸರು ಎರಡು ರೇಡ್ಗಳಲ್ಲಿ 300ಕ್ಕೂ ಹೆಚ್ಚು ಮಂದಿ ಬಂಧಿಸಿದ್ದರು. ವಿಚಾರಣೆ ಸಂದರ್ಭದಲ್ಲೂ ಹಲವು ಮಾಹಿತಿ ಕಲೆ ಹಾಕಿದೆ. ಇದೇ ದಾಳಿಗಳಿಂದ ಲಭ್ಯವಾದ ಮಾಹಿತಿಯೇ ಪಿಎಫ್ಐ ನಿಷೇಧಕ್ಕೆ ಕಾರಣ ಎಂದು ಹೇಳಲಾಗಿದೆ.
ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ ಪಿಎಫ್ಐ ಅಲ್ಲದೆ 8 ಅಂಗ ಸಂಸ್ಥೆಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. PFI ಹೊರತಾಗಿ, ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ , ಕೇರಳದಂತಹ ಮಿತ್ರ ಸಂಘಟನೆಗಳನ್ನೂ ನಿಷೇಧಿಸಲಾಗಿದೆ.