Ad Widget .

ಧರ್ಮಸ್ಥಳ: ಕಾಡಿನಲ್ಲಿ ವಿಷಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ| ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಅರಕಲಗೂಡಿನ ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Ad Widget . Ad Widget .

ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದ ನಿವಾಸಿ ಸುನಿಲ್‌ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ದೇವರ ದರ್ಶನ ಮುಗಿಸಿ ಮಧ್ಯಾಹ್ನದ ಅನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ವಿಷ ಪದಾರ್ಥ ಕುಡಿಯುತ್ತಾ ತನ್ನ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ, ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದರು.

Ad Widget . Ad Widget .

ತತ್‌ಕ್ಷಣವೇ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಅನಿಲ್‌ ಕುಮಾರ್‌ ಮತ್ತು ಸಿಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್‌ನನ್ನು ಪತ್ತೆ ಮಾಡಿ ಉಜಿರೆ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದಾರೆ.

ಕೌಟುಂಬಿಕ ಕಲಹ ಕಾರಣ?
ಸುನಿಲ್‌ ಊರಿನಲ್ಲಿ ಪಾದರಕ್ಷೆಯ ಮಳಿಗೆಯನ್ನು ಹೊಂದಿದ್ದು, ಮದುವೆಯಾಗಿ ಮೂರು ತಿಂಗಳ ಮಗು ಕೂಡ ಇದೆ. ದಂಪತಿ ನಡುವೆ ಉಂಟಾದ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *