ಸಮಗ್ರ ನ್ಯೂಸ್: ‘ನಾನು ವಂಶ ಪಾರಂಪರಿಕ ರಾಜಕೀಯದ ಪ್ರತೀಕ. ನಾನು ಜನರ ಹೃದಯದಲ್ಲಿ ಆಡಳಿತ ನಡೆಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಗೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಬಿಜೆಪಿ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಮಾಜಿ ಸಚಿವೆ ಪಂಕಜಾ ಮುಂಡೆ ಹೇಳಿದ್ದಾರೆ.
ಈ ಮೂಲಕ ವಂಶಪಾರಂಪರ್ಯ ರಾಜಕೀಯಕ್ಕೆ ಕೊನೆ ಹಾಡಬೇಕೆಂದು ಬಯಸುತ್ತಿರುವ ಮೋದಿಗೆ ಪರೋಕ್ಷ ಸವಾಲು ಹಾಕಿದ್ದಾರೆ. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ದಿನ ನಡೆದ ಕಾರ್ಯಕ್ರಮದಲ್ಲಿ ಪಂಕಜಾ ಮುಂಡೆ ಈ ಮಾತನ್ನು ಹೇಳಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು ಮಹಾರಾಷ್ಟ್ರ ರಾಜ್ಯ ಬಿಜೆಪಿಗೆ ಮುಜುಗರ ಉಂಟುಮಾಡಿದೆ.
ಭಾರತೀಯ ಜನತಾ ಪಕ್ಷದ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರದ ಮಾಜಿ ಸಚಿವೆ ಪಂಕಜಾ ಮುಂಡೆ ಅವರು ತನ್ನನ್ನು ತಾನು ವಂಶಪಾರಂಪರಿಕ ರಾಜಕೀಯದ ಪ್ರತೀಕ ಎಂದು ಕರೆದುಕೊಂಡರು. ಹಾಗೂ ಜನರ ಹೃದಯದಲ್ಲಿ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ತನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಹೇಳಿದ್ದಾರೆ. ಸೆಪ್ಟೆಂಬರ್ 17ರಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದರು ಎಂದು ತಿಳಿದುಬಂದಿದೆ.
ಆದರೆ ಮಹಾರಾಷ್ಟ್ರ ಬಿಜೆಪಿ ಈ ವಿಡಿಯೋ ವೈರಲ್ ಹಾಕುತ್ತಿದ್ದಂತೆ ತೇಪೆ ಹಾಕುವ ಕೆಲಸ ಶುರು ಮಾಡಿದ್ದು, ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸುತ್ತಿದೆ. ಮಾಧ್ಯಮಗಳು ಪಂಕಜಾ ಅವರ ಮಾತುಗಡ ತಿರುಚಿವೆ ಎಂದು ಬಿಜೆಪಿ ನಾಯಕರು ಆಪಾದಿಸಿದ್ದಾರೆ.