Ad Widget .

ಪ್ರವೀಣ್ ನೆಟ್ಟಾರು‌ ಪತ್ನಿಗೆ ಸಿಎಂ ಕಚೇರಿಯಲ್ಲಿ ನೇಮಕಾತಿ ಮಾಡಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಇತ್ತೀಚೆಗೆ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget . Ad Widget .

ಪ್ರವೀಣ್ ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Ad Widget . Ad Widget .

ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇದೀಗ ನೇಮಕಾತಿ ಮಾಡಿ ಸರಕಾರ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *