September 2022

108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು

ಸಮಗ್ರ ನ್ಯೂಸ್:  ಆಸ್ಪತ್ರೆಗೆ ದಾಖಲಾಗಬೇಕಿದ್ದ ಮಹಿಳೆಯೊಬ್ಬರು ಆಂಬುಲೆನ್ಸ್ ಸಿಗದೇ ಸಾವನ್ನಪ್ಪಿದ ಘಟನೆಯೊಂದು ತುಮಕೂರಿನಲ್ಲಿ ನಡೆದಿದೆ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗದ ಪರಿಣಾಮ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಐಡಿಹಳ್ಳಿಯ 65 ವರ್ಷದ ಜಯಮ್ಮ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕುಟುಂಬದವರು 108 ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಕರೆ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರೂ ಆಂಬುಲೆನ್ಸ್ ಬಂದಿಲ್ಲ. ಮಧುಗಿರಿ ತಾಲೂಕು ಆರೋಗ್ಯಾಧಿಕಾರಿಗೆ ಕರೆ ಮಾಡಿದ ಜಯಮ್ಮ ಕುಟುಂಬ ಆಂಬುಲೆನ್ಸ್ […]

108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು Read More »

ಎರಡು ದಿನಗಳಿಂದ 108 ಆಂಬುಲೆನ್ಸ್ ಸೇವೆಗೆ ಕರೆ ಮಾಡಿದರೆ ಸ್ಪಂದಿಸುತ್ತಿಲ್ಲ, ಜನರ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಆರೋಗ್ಯ ಇಲಾಖೆ 108 ಆಂಬುಲೆನ್ಸ್ ಸೇವೆ ಬಂದ್ ಆಗಿದೆ ಎಂಬ ಮಾತು ಕೇಳಿಬರುತ್ತಿವೆ. ಯಾವುದೋ ತಾಂತ್ರಿಕ ದೋಷದಿಂದಾಗಿ 108 ಗೆ ಕರೆ ಮಾಡಿದರೂ ಯಾರೂ ಸಹ ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ತಿಳಿದುಬಂದಿದೆ. ಜಿವಿಕೆ ಏಜನ್ಸಿ ಮೂಲಕ 108 ಆಂಬುಲೆನ್ಸ್ ಸೇವೆ ನಡೆಯುತ್ತಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ತುರ್ತು ಸೇವೆ ಬಂದ್ ಆಗಿದೆ. ಎರಡು ದಿನಗಳಿಂದ ಈ ಸಮಸ್ಯೆಯಾಗಿದ್ದರೂ ಆರೋಗ್ಯ ಇಲಾಖೆಯಾಗಲಿ, ಸರ್ಕಾರವಾಗಲಿ ಈ

ಎರಡು ದಿನಗಳಿಂದ 108 ಆಂಬುಲೆನ್ಸ್ ಸೇವೆಗೆ ಕರೆ ಮಾಡಿದರೆ ಸ್ಪಂದಿಸುತ್ತಿಲ್ಲ, ಜನರ ಆಕ್ರೋಶ Read More »

ಬೆಸ್ಕಾಂ ಗ್ರಾಹಕರಿಗೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ

ಸಮಗ್ರ ನ್ಯೂಸ್ : ಬೆಸ್ಕಾಂನ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾಗಿದ್ದು, ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ಅಳವಡಿಸಲು ಬೆಸ್ಕಾಂ ಮುಂದಾಗಿದೆ. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,57,379 ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗಿದೆ. ಈ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಗ್ರಾಹಕರು ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹಾಗೂ ಅರ್ಜಿ ಸಲ್ಲಿಸುವ ಅವಶ್ಯಕತೆಯೂ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಗ್ರಾಹಕರಿಗೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ Read More »

ಸೇತುವೆ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ

ಸಮಗ್ರ ನ್ಯೂಸ್: ಸೇತುವೆ ಬಳಿ ಬೈಕ್ ಬಿಟ್ಟು ಯುವಕನೊಬ್ಬ ನಾಪತ್ತೆಯಾದ ಘಟನೆಯೊಂದು ಪಡುಕೆರೆಯ ಪಾಪನಾಸಿನಿ ನದಿ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನನ್ನು ದಾವಣಗೆರೆ ಮೂಲದ ಶಿವ ಎಂದು ಗುರುತಿಸಲಾಗಿದೆ. ಯುವಕ ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಎಂದು ಹೇಳಲಾಗಿದ್ದು, ಪಾಪನಾಸಿನಿ ನದಿಗೆ ಕಟ್ಟಲಾಗಿರುವ ಸೇತುವೆ ಬಳಿ ಬೈಕ್ ಪತ್ತೆಯಾಗಿದ್ದು, ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ ಯುವಕನಿಗಾಗಿ ಸ್ಥಳೀಯ ಮುಳುಗು ತಜ್ಞರಿಂದ ಶೋಧ ನಡೆಸಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇತುವೆ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ Read More »

ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಹಾವು ಕಡಿದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಶಿವನೂರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ 10ನೇ ತರಗತಿ ವಿದ್ಯಾರ್ಥಿನಿ ದೀಪಾ ಅಪ್ಪಾಸಾಬ ಮೇತ್ರಿ ಹಾವು ಕಚ್ಚಿ ಸಾವನ್ನಪ್ಪಿದ್ದ ದುರ್ದೈವಿ. ಶನಿವಾರ ಶಾಲೆ ಮುಗಿಸಿ ಮನೆಗೆ ಬಂದು ಮನೆಯಲ್ಲಿ ಮಲಗಿದಾಗ ಹಾವು ಕಚ್ಚಿದೆ. ತಕ್ಷಣ ಎಚ್ಚರಗೊಂಡು ಗಮನಿಸಿದಾಗ ಮನೆಯವರಿಗೆ ಹಾವು ಕಚ್ಚಿರುವ ವಿಷಯ ಗೊತ್ತಾಗಿದೆ. ನಂತರ ಚಿಕಿತ್ಸೆ ಕರೆದುಕೊಂಡು ಹೋಗುವ ಸಮಯದಲ್ಲಿ ನಡುದಾರಿಯಲ್ಲಿ ದಾರಿಯಲ್ಲಿ ಸಾವನ್ನಪ್ಪಿದ್ದು ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹಾವು ಕಚ್ಚಿ ವಿದ್ಯಾರ್ಥಿನಿ ಸಾವು Read More »

ಸುಳ್ಯ: ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಶಂಕಾಸ್ಪದ ವ್ಯಕ್ತಿಗಳ ತಿರುಗಾಟ; ಮಾಹಿತಿ ತಿಳಿಸಲು ಠಾಣಾಧಿಕಾರಿ ಸೂಚನೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ,ಮುರೂರು, ಬಡ್ಡಡ್ಕ, ಕನ್ನಡಿ ತೋಡು ಚೆಕ್ ಪಾಯಿಂಟ್ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ನೀಡಿರುವ ಮಾಹಿತಿಯಂತೆ ನಂಬರ್ ಪ್ಲೇಟ್ ಇಲ್ಲದೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಸ್ಕೂಟರ್ ನಲ್ಲಿ ಅನುಮಾನಾಸ್ಪದವಾಗಿ ತಿರುಗಾಟ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಅನುಮಾನಾಸ್ಪದ ವ್ಯಕ್ತಿಗಳು ಚೆಕ್ ಪಾಯಿಂಟ್ ನಲ್ಲಿ ಕಂಡು ಬಂದರೆ ಅವರನ್ನು ಚೆಕ್ ಪಾಯಿಂಟ್ ನಲ್ಲಿ ತಡೆದು ನಿಲ್ಲಿಸಲು ಸುಳ್ಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.

ಸುಳ್ಯ: ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಶಂಕಾಸ್ಪದ ವ್ಯಕ್ತಿಗಳ ತಿರುಗಾಟ; ಮಾಹಿತಿ ತಿಳಿಸಲು ಠಾಣಾಧಿಕಾರಿ ಸೂಚನೆ Read More »

ಶಿರಾಡಿ: ಕೆ.ಎಸ್.ಆರ್.ಟಿ.ಸಿ ಹಾಗೂ ಕಾರು ನಡುವೆ ಡಿಕ್ಕಿ; ಪ್ರಯಾಣಿಕರು ಜಖಂ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್, ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಶಿರಾಡಿ ಹೊರಠಾಣೆಯ

ಶಿರಾಡಿ: ಕೆ.ಎಸ್.ಆರ್.ಟಿ.ಸಿ ಹಾಗೂ ಕಾರು ನಡುವೆ ಡಿಕ್ಕಿ; ಪ್ರಯಾಣಿಕರು ಜಖಂ Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್.ಎಂ.ಕೃಷ್ಣ ಅವರು ತೀವ್ರ ಜ್ವರ, ಶ್ವಾಸಕೋಶ ಇನ್​ಫೆಕ್ಷನ್​ನಿಂದ ಬಳಲುತ್ತಿದ್ದಾರೆ. ಮೊದಲು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ರಾತ್ರಿ ಮಣಿಪಾಲ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಡಾ.ಸತ್ಯನಾರಾಯಣ್​, ಡಾ.ಸುನೀಲ್​ ಕಾರಂತ್​ ತಂಡ ಚಿಕಿತ್ಸೆ ನೀಡುತ್ತಿದೆ. ಶನಿವಾರ ರಾತ್ರಿಯೇ ಮಣಿಪಾಲ್​ ಆಸ್ಪತ್ರೆಗೆ ಎಸ್​.ಎಂ.ಕೃಷ್ಣ ಅವರನ್ನು ಸ್ಥಳಾಂತರಿಸಲಾಗಿದ್ದು, ರಾತ್ರಿಯಿಡೀ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್​ ಅವರೂ ಎಸ್​ಎಂಕೆ ಆರೋಗ್ಯದ ಬಗ್ಗೆ ನಿಗಾವಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಶಾಸಕ ಡಾ.ಎಚ್​.ಡಿ.ರಂಗನಾಥ್​

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಕುವೈತ್ ನಲ್ಲಿ ಅಪಘಾತಕ್ಕೆ ಮಂಗಳೂರು ಮೂಲದ ಯುವಕ ಬಲಿ

ಸಮಗ್ರ ನ್ಯೂಸ್: ಕುವೈತ್‌ನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಬಜಾಲ್‌ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಮೃತಪಟ್ಟಿದ್ದಾರೆ. ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್‌ ಆಗಿದ್ದ ಅವರು ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಮರಳುವ ವೇಳೆ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ, ತಾಯಿಯನ್ನು ಅಗಲಿದ್ದಾರೆ.

ಕುವೈತ್ ನಲ್ಲಿ ಅಪಘಾತಕ್ಕೆ ಮಂಗಳೂರು ಮೂಲದ ಯುವಕ ಬಲಿ Read More »

ಪಶು ವೈದ್ಯಕೀಯ ಸಹಾಯಕರ ನೇಮಕಾತಿ ಅಧಿಸೂಚನೆ ಪ್ರಕಟ| 250 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಖಾಲಿ ಇರುವ ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆಯಾಗಿದ್ದು, ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗೆ ಪಶು ಸಂಗೋಪನೆ ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ, ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್‌ ನಲ್ಲಿ ಉತ್ತೀರ್ಣರಾಗಿರುವವರು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಸಲ್ಲಿಸಲು ವಯೋಮಿತಿ‌

ಪಶು ವೈದ್ಯಕೀಯ ಸಹಾಯಕರ ನೇಮಕಾತಿ ಅಧಿಸೂಚನೆ ಪ್ರಕಟ| 250 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ Read More »