September 2022

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಜಾತ್ರೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದರಿಂದ ರಕ್ತಸ್ರಾವವಾಗುತ್ತಿದ್ದ ಆಕೆ ತನ್ನ ಪ್ರಾಣ ಉಳಿಸಿಕೊಳ್ಳಲು ರಸ್ತೆಯಲ್ಲಿ ನಗ್ನವಾಗಿಯೇ ಓಡಿಕೊಂಡು ಹೋಗುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. ಆ ರಸ್ತೆಯಲ್ಲಿ ರಾತ್ರಿ […]

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ಸಾರಿಗೆ ಇಲಾಖೆಯಲ್ಲಿ 2814 ಚಾಲಕ, ನಿರ್ವಾಹಕ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೊಸದಾಗಿ 2814 ಚಾಲಕರು ಹಾಗೂ ನಿರ್ವಾಹಕರ ನೇಮಕಾತಿಗೆ ತೀರ್ಮಾನಿಸಲಾಗಿದೆ. ಸಾರಿಗೆ ಸಚಿವ ಶ್ರೀರಾಮುಲು ವಿಧಾನಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ನಿಂಬಣ್ಣನವರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.ಕೊರೋನಾ ಕಾರಣದಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಚಾಲನೆ ನೀಡಲಾಗಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ. 2814 ಸಿಬ್ಬಂದಿ ನೇಮಕ ಮಾಡಲಾಗುವುದು. ಮತ್ತು ಅಗತ್ಯ ಇರುವ ಕಡೆ ನಿಯೋಜಿಸಲಾಗುವುದು ಎಂದು ಶ್ರೀರಾಮುಲು ಮಾಹಿತಿ ನೀಡಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ಸಾರಿಗೆ ಇಲಾಖೆಯಲ್ಲಿ 2814 ಚಾಲಕ, ನಿರ್ವಾಹಕ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ Read More »

ಹಿಜಾಬ್ ವಿವಾದ ವಿಚಾರಣೆ ಮುಕ್ತಾಯ| ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಸಮಗ್ರ‌ ನ್ಯೂಸ್: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಹಿಜಾಬ್ ಕುರಿತು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ವಾದ-ಪ್ರತಿವಾದಗಳನ್ನು ಆಲಿಸಿದ್ದು, ತೀರ್ಪು ಕಾಯ್ದಿರಿಸಿದೆ. ಕಳೆದ 10 ದಿನಗಳಿಂದ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಚಿಹ್ನೆಗಳಿಗೆ ಅವಕಾಶವಿಲ್ಲ, ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ

ಹಿಜಾಬ್ ವಿವಾದ ವಿಚಾರಣೆ ಮುಕ್ತಾಯ| ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ Read More »

ಇದಪ್ಪಾ ಆಟ ಅಂದ್ರೆ| ಬ್ಯಾಟಿಂಗ್ ನಲ್ಲಿ ಪಂಟರ್, ಬೌಲಿಂಗ್ ನಲ್ಲಿ ಉಡೀಸ್| ಸಿಪಿಎಲ್ ಲೀಗ್ ನಲ್ಲಿ ಒಡಿಯನ್ ಸ್ಮಿತ್ ಅಬ್ಬರಕ್ಕೆ ಮೈದಾನದಲ್ಲಿ ಬಿರುಗಾಳಿ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯರ್ ಪ್ರೀಮಿಯರ್ ಲೀಗ್​ನಲ್ಲಿ ಒಡಿಯನ್ ಸ್ಮಿತ್ ಅಕ್ಷರಶಃ ಅಬ್ಬರಿಸಿದ್ದಾರೆ. ಸಿಪಿಎಲ್​ನ 25ನೇ ಪಂದ್ಯದಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಹಾಗೂ ಜಮೈಕಾ ತಲ್ಲವಾಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಮೈಕಾ ನಾಯಕ ರೋವ್ಮನ್ ಪೊವೆಲ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಜಮೈಕಾ ಬೌಲರ್​ಗಳು 15 ಓವರ್​ನಲ್ಲಿ ನೀಡಿದ್ದು ಕೇವಲ 97 ರನ್​ಗಳು ಮಾತ್ರ. ಅಷ್ಟೇ ಅಲ್ಲದೆ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ 6 ಪ್ರಮುಖ

ಇದಪ್ಪಾ ಆಟ ಅಂದ್ರೆ| ಬ್ಯಾಟಿಂಗ್ ನಲ್ಲಿ ಪಂಟರ್, ಬೌಲಿಂಗ್ ನಲ್ಲಿ ಉಡೀಸ್| ಸಿಪಿಎಲ್ ಲೀಗ್ ನಲ್ಲಿ ಒಡಿಯನ್ ಸ್ಮಿತ್ ಅಬ್ಬರಕ್ಕೆ ಮೈದಾನದಲ್ಲಿ ಬಿರುಗಾಳಿ Read More »

ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ಮುಖಾಮುಖಿ/ವಯಸ್ಸಿನ ಕುರಿತು ಲಘು ಸಂಭಾಷಣೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಮುಖಾಮುಖಿಯಾದರು. ಈ ವೇಳೆ ಇಬ್ಬರು ನಾಯಕರು ವಯಸ್ಸಿನ ಕುರಿತು ಲಘು ಸಂಭಾಷಣೆ ನಡೆಸಿದರು. ಮಾಜಿ ಸಿಎಂ ಯಡಿಯೂರಪ್ಪ ಬರುವಾಗ ಎದುರಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಿಕ್ಕಿದ್ದಾರೆ. ಆ ವೇಳೆ ಬಿಎಸ್‍ವೈ ಬಳಿ ಸಿಎಂ, ಸರ್ ಕೌನ್ಸಿಲ್‍ಗೆ ಹೋಗ್ತಾ ಇದ್ದೇನೆ ಎಂದು ಹೇಳಿ ಅಲ್ಲಿಂದ ಹೊರಟಿದ್ದಾರೆ. ಬಳಿಕ ವಿಧಾನ ಸಭೆಯ ಆಡಳಿತ ಪಕ್ಷದ ಮೊಗಸಾಲೆಗೆ ಹೋಗುವ ದಾರಿಯಲ್ಲಿ ಎದುರಿಗೆ ಸಿಕ್ಕ

ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ಮುಖಾಮುಖಿ/ವಯಸ್ಸಿನ ಕುರಿತು ಲಘು ಸಂಭಾಷಣೆ Read More »

ಗೋವಾದಲ್ಲಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆ ಬಾಡಿಗೆಗಿದೆ/ಸೌಲಭ್ಯಗಳು ಏನಿದೆ?

ಬೆಂಗಳೂರು : ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಘೋಷಿಸಿದ್ದಾರೆ. ಗೋವಾದಲ್ಲಿರುವ ತಮ್ಮ ಐಷಾರಾಮಿ ಮನೆಯನ್ನು ಯುವಿ ಬಾಡಿಗೆ ನೀಡುವುದಾಗಿ ತಿಳಿದ್ದಾರೆ. ಅದ್ಭುತ ಈಜುಕೊಳ ಮತ್ತು ಸುಂದರವಾದ ನೋಟದೊಂದಿಗೆ ದೊಡ್ಡ ಟೆರೇಸ್‌ನಂತಹ ಅನೇಕ ಸೌಲಭ್ಯಗಳನ್ನು ಈ ಮನೆ ಹೊಂದಿದೆ. ಈ ಕುರಿತು ಯುವರಾಜ್‌ ಸಿಂಗ್‌ ತಮ್ಮ ಟ್ಟಿಟರ್‌ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮನೆಯ ಫೋಟೋಸ್‌ ಹಾಗೂ ಮಾಹಿತಿಯನ್ನು ಪೋಸ್ಟ್ ಮಾಡಿ ಮನೆ ಬಾಡಿಗೆಗೆ ಇದೆ ಎಂದು ಹೇಳಿದ್ದಾರೆ. Airbnb ನಲ್ಲಿ ನನ್ನ

ಗೋವಾದಲ್ಲಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆ ಬಾಡಿಗೆಗಿದೆ/ಸೌಲಭ್ಯಗಳು ಏನಿದೆ? Read More »

ಸಿದ್ದರಾಮಯ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾದ ಹಿನ್ನೆಲೆ ಸೆ.26 ಕ್ಕೆ ಭೋಜನಕೂಟ ಆಯೋಜನೆ

ಸಮಗ್ರ ನ್ಯೂಸ್ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯೋತ್ಸವ ಕಾರ್ಯಕ್ರಮದ ಯಶಸ್ವಿ ಹಿನ್ನೆಲೆ ಇದೇ ತಿಂಗಳ 26ನೇ ತಾರೀಕಿನಂದು ಭೋಜನಕೂಟವನ್ನು ಆಯೋಜನೆ ಮಾಡಿದ್ದಾರೆ. ಬೆಂಗಳೂರಿನ ಕೊಡವ ಸಮಾಜ ಭವನದಲ್ಲಿ ಮಧ್ಯಾಹ್ನ ಸುಮಾರು 2,000 ಜನರಿಗೆ ಭೋಜನಕೂಟವನ್ನು ಆಯೋಜನೆ ಮಾಡಿದ್ದು ಆಹ್ವಾನಿಸಲಾಗಿದೆ. ಭೋಜನಕೂಟದಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಸಂಸದರು, ಕೆಪಿಸಿಸಿ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳಿಗೂ ಸಹ ಭೋಜನಕೂಟಕ್ಕೆ ಆಹ್ವಾನ ನೀಡಲಾಗಿದೆ.

ಸಿದ್ದರಾಮಯ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾದ ಹಿನ್ನೆಲೆ ಸೆ.26 ಕ್ಕೆ ಭೋಜನಕೂಟ ಆಯೋಜನೆ Read More »

ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ

ಬೆಂಗಳೂರು: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ , ಟೆರಸ್ಸ್‌ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಯ 100ಕ್ಕೂ ಹೆಚ್ಚು

ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ Read More »

ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನ ಬಂಧಿಸಿದ ಪೋಲಿಸರು

ಸಮಗ್ರ ನ್ಯೂಸ್ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನನ್ನು ಪೊಲೀಸರು ಬಂಧಿಸಿದ್ದಾರೆ. ಗಬ್ಬೂರು ಹೋಬಳಿಯ ಬೂರಿನಾಳ ಗ್ರಾಮದ ರೈತ ಸಿದ್ದಯ್ಯ ಪೂಜಾರಿ ತನ್ನ ಸ್ವಂತ ಜಮೀನಿನಲ್ಲಿ ಹತ್ತಿ ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆ ಬೆಳೆದಿದ್ದ. ಮಾಹಿತಿ ಪಡೆದ ಪೋಲಿಸರು ದಾಳಿ ನಡೆಸಿ ಸುಮಾರು 1.49 ಕೆ.ಜಿ ಒಣ ಗಾಂಜಾ, 760 ಗ್ರಾಂ ಹಸಿ ಗಾಂಜಾ ಮತ್ತು 2750 ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಗಬ್ಬೂರು ಠಾಣೆಯ ಪೊಲೀಸರು ಆರೋಪಿ

ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನ ಬಂಧಿಸಿದ ಪೋಲಿಸರು Read More »

ವಿವಿಧ ಕಡೆ ಎನ್ಐಎ ದಾಳಿ | ಕೊಪ್ಪಳದಲ್ಲಿ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಬಂಧನ

ಕೊಪ್ಪಳ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಈ ನಡುವೆ ಕರ್ನಾಟಕದ ಕೊಪ್ಪಳ ಜಿಲ್ಲೆಯ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫೈಯಾಜ್‍ನನ್ನು ಬಂಧಿಸಿದ್ದಾರೆ. ಎಸ್‍ಪಿ ನೇತೃತ್ವದಲ್ಲಿ ಪೊಲೀಸ್

ವಿವಿಧ ಕಡೆ ಎನ್ಐಎ ದಾಳಿ | ಕೊಪ್ಪಳದಲ್ಲಿ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಬಂಧನ Read More »