September 2022

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ

ಬೆಂಗಳೂರು: ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. “ಭಾರತ ಜೋಡೋ ಯಾತ್ರೆಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ” ಎಂದಿದ್ದಾರೆ. “ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ […]

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ Read More »

ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಮೂಡಿಗೆರೆ ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಬಾರಿ ಗಾಳಿ ಮಳೆಗೆ ಗುಡ್ಡ ಕುಸಿದಿತ್ತು. ಅದರ ಪರಿಣಾಮವಾಗಿ ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಮಣ್ಣು ಕುಸಿಯದಂತೆ ತಡೆಯಲು ಮನುಷ್ಯ ತೆರಳಿ ಗಿಡ ನೆಡದಂತಹ ಪ್ರದೇಶಗಳಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆಗೆ ಮುಂದಾಗಿದೆ. ಚಾರ್ಮಾಡಿ ಘಾಟ್, ಬಿದ್ರುತಳ, ಮದುಗುಂಡಿ, ಮೇಗೂರು, ಸೇರಿದಂತೆ ಹಲವೆಡೆ ಗುಡ್ಡ ಕುಸಿತವಾಗಿ

ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.
Read More »

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ!|ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ ಇತಿಹಾಸದಲ್ಲೇ ಈ ಬಾರಿಯ ದಸರಾ ಅತ್ಯಂತ ಮಹತ್ವದ್ದಾಗಲಿದೆ. ದಸರಾ ಇತಿಹಾಸ ಪುಟಗಳಲ್ಲಿ ಈ ಬಾರಿಯ ದಸರಾ ಪ್ರಮುಖ ಸ್ಥಾನ ಪಡೆಯಲಿದೆ. ನಾಡಹಬ್ಬ ದಸರಾ ಸೆ. 26 ರಿಂದ ಆರಂಭವಾಗಲಿದೆ‌. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು ದಸರಾ ಉದ್ಘಾಟಿಸಲಿದ್ದಾರೆ. ಇಷ್ಟು ವರ್ಷ ನಾಡಿನ ಹಿರಿಯ ಸಾಹಿತಿಗಳು, ಸ್ವಾಮೀಜಿಗಳು, ವಿಚಾರವಾದಿಗಳು, ನಾಡು ನುಡಿಗೆ ಅಸಾಮಾನ್ಯ ಸೇವೆ ಸಲ್ಲಿಸಿದವರು ದಸರಾ ಉದ್ಘಾಟಿಸುತ್ತಿದ್ದರು. ಕಳೆದ ಬಾರಿ ಈ

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ!|ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು Read More »

ಲಕ್ಷ್ಮಣತೀರ್ಥ ನದಿಯಲ್ಲಿ ಯುವಕನ ಶವಪತ್ತೆ

ಸಮಗ್ರ ನ್ಯೂಸ್: ಹುಣಸೂರು ಲಕ್ಷ್ಮಣತೀರ್ಥ ನದಿಯ ಕಟ್ಟೆಮಳಲವಾಡಿ ಅಣೆಕಟ್ಟೆ ಬಳಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ದಾವಣಿ ಬೀದಿಯ ನಿತ್ಯಾನಂದರ ಪುತ್ರ, ಸ್ಟೋರ್ ಬೀದಿ ನಿವಾಸಿ ರಾಘವೇಂದ್ರ(24)ರ ಶವ ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು, ಈತನ ಪಲ್ಸರ್ ಬೈಕ್, ಮೊಬೈಲ್, ಪರ್ಸ್,ಪಾನ್‌ಕಾರ್ಡ್, ಡಿ.ಎಲ್. ಚಿಕ್ಕಹುಣಸೂರು ಹಳೇ ಊರಿನ ನದಿಯ ಬಳಿಯ ಜಮೀನಿನಲ್ಲಿ ಪತ್ತೆಯಾಗಿತ್ತು. ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಎಸ್.ಐ.ರಾಧಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಘವೇಂದ್ರರ

ಲಕ್ಷ್ಮಣತೀರ್ಥ ನದಿಯಲ್ಲಿ ಯುವಕನ ಶವಪತ್ತೆ Read More »

ಪುತ್ತೂರು: ಮಹಿಳೆ ಮೇಲೆ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ‌ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆ. 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ದಿನಸಿ ತರಲೆಂದು‌ ಅಂಗಡಿಗೆ ಬಂದ ಮಹಿಳೆಯ ಮೇಲೆ ಹಾಡುಹಗಲೇ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಯಾವುದೇ ಭಯವಿಲ್ಲದೆ‌ ಈ ರೀತಿಯ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಪುತ್ತೂರು: ಮಹಿಳೆ ಮೇಲೆ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ Read More »

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ವಿಶ್ವೇಶ್ವರ

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು Read More »

ಎಕ್ಸೆಲ್ ಕಾಲೇಜು ವಿದ್ಯಾರ್ಥಿನಿ ದೀಕ್ಷಾ ಎನ್ ಸಿಇಆರ್ ಟಿ ನಡೆಸಿದ ಪರೀಕ್ಷೆ ಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಬಿ.ಎನ್ ಅವರು ಎನ್ ಸಿಇಆರ್ ಟಿ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ 593 ಅಂಕಗಳನ್ನು ಪಡೆದು ರಾಜ್ಯಕ್ಕೆ ಆರನೇ‌ ರಾಂಕ್ ಪಡೆದಿದ್ದರು. ಸಿಇಟಿ ಪರೀಕ್ಷೆ ಯಲ್ಲಿಯೂ ಉತ್ತಮ ಫಲಿತಾಂಶ ಗಳಿಸಿದ್ದಾರೆ. ಎನ್ ಸಿಇಆರ್ ಟಿ ಗಳಲ್ಲಿ ಆಯ್ಕೆಯಾದವರು ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಗಳಲ್ಲಿ ವಿದ್ಯಾಭ್ಯಾಸ ಕ್ಕೆ ಅವಕಾಶ ವಿರುತ್ತದೆ.ಹಾಗೂ ಮೈಸೂರಿನ ಆರ್

ಎಕ್ಸೆಲ್ ಕಾಲೇಜು ವಿದ್ಯಾರ್ಥಿನಿ ದೀಕ್ಷಾ ಎನ್ ಸಿಇಆರ್ ಟಿ ನಡೆಸಿದ ಪರೀಕ್ಷೆ ಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ Read More »

ಉಕ್ರೇನ್ ನ ಅಧ್ಯಕ್ಷ ಝೆಲೆನ್ ಸ್ಕಿ ಅವರ ಕಾರು ಅಪಘಾತ; ಗಂಭೀರ ಗಾಯ

ಸಮಗ್ರ ನ್ಯೂಸ್ : ಉಕ್ರೇನ್‍ನ ಅಧ್ಯಕ್ಷ ಝೆಲೆನ್‍ಸ್ಕಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಇಂದು ಬೆಳಗ್ಗೆ ನಡೆದಿದೆ. ರಷ್ಯಾ ವಿರುದ್ಧ ನಡೆಯುತ್ತಿರುವ ಯುದ್ಧದ ನಡೆವೆಯೇ ಉಕ್ರೇನ್ ಸೇನಾ ಪಡೆಯ ಯೋಧರನ್ನು ಭೇಟಿ ಮಾಡಿ ಕೈವ್‍ಗೆ ತೆರಳುತ್ತಿದ್ದಾಗ ಅವರ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತವಾಗುತ್ತಿದ್ದಂತೆಯೇ ಗಾಯಗೊಂಡಿದ್ದ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎಂದು ವೈದ್ಯರು

ಉಕ್ರೇನ್ ನ ಅಧ್ಯಕ್ಷ ಝೆಲೆನ್ ಸ್ಕಿ ಅವರ ಕಾರು ಅಪಘಾತ; ಗಂಭೀರ ಗಾಯ Read More »

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ

ಮಸ್ಕತ್ : ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಒಮಾನ್ನ ಮಸ್ಕತ್ ನಲ್ಲಿ ನಡೆದಿದೆ. ಮಸ್ಕತ್ ವಿಮಾನ ನಿಲ್ದಾಣದಲ್ಲಿ ವಿಮಾನವು ಟೇಕ್ ಆಫ್ ಮಾಡುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೊಚ್ಚಿಗೆ ಹೊರಟಿತ್ತು. ವಿಮಾನದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು 145 ಪ್ರಯಾಣಿಕರಿದ್ದರು. ಅವರೆಲ್ಲರನ್ನು ವಿಮಾನದಿಂದ ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ Read More »

ಶಿವಮೊಗ್ಗ ದಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಶುಭಸುದ್ದಿ

ಸಮಗ್ರ ನ್ಯೂಸ್:  ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನ ರೈಲಿನ ಸೌಲಭ್ಯ ಇಲ್ಲವೆಂದು ಎಲ್ಲರಿಗೂ ಸಮಸ್ಯೆ ಕಾಡುತ್ತಿತ್ತು. ಇದೀಗ ಈ ಸೌಲಭ್ಯವೂ ಶಿವಮೊಗ್ಗ ಜಿಲ್ಲೆಯ ಜನತೆಗೆ ಸಿಗುತ್ತಿದ್ದು, ಸೆಪ್ಟೆಂಬರ್ 12ರಿಂದ ನೂತನ ರೈಲು ಸಂಚಾರ ಆರಂಭವಾಗಿದೆ. ಶಿವಮೊಗ್ಗ – ಯಶವಂತಪುರ – ಬಾಣಸವಾಡಿ ನಡುವೆ ಈ ರೈಲು ಸಂಚರಿಸಲಿದ್ದು, ಶಿವಮೊಗ್ಗ ನಗರವನ್ನು ಮಧ್ಯಾಹ್ನ 1-05 ಕ್ಕೆ ಬಿಡಲಿದೆ. ಸಂಜೆ 5-30ಕ್ಕೆ ತುಮಕೂರನ್ನು ತಲುಪಲಿದ್ದು, ಅಲ್ಲಿಂದ 5-40ಕ್ಕೆ ಹೊರಟು ಸಂಜೆ 6-50 ಕ್ಕೆ ಯಶವಂತಪುರ ತಲುಪಿ 7-40 ಕ್ಕೆ ಬಾಣಸವಾಡಿ ತಲುಪಲಿದೆ.

ಶಿವಮೊಗ್ಗ ದಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಶುಭಸುದ್ದಿ Read More »