September 2022

ಪುತ್ತೂರು: ಹಿಂದೂ ಮಹಿಳೆ‌ ಮೇಲೆ ಮುಸ್ಲಿಂ ಯುವಕನಿಂದ‌ ಲೈಂಗಿನ ಕಿರುಕುಳ|

ಸಮಗ್ರ ನ್ಯೂಸ್: ಅಂಗಡಿಯೊಂದರಲ್ಲಿ ದಿನಸಿ ಖರೀದಿಸುತ್ತಿದ್ದ ಹಿಂದೂ ಮಹಿಳೆಗೆ ಅಂಗಡಿ ಮಾಲಕನಿಲ್ಲದ ಸಂದರ್ಭದಲ್ಲಿ ಅಲ್ಲಿದ್ದ ಮುಸ್ಲಿಂ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸ್ಥಳದಲ್ಲಿ ನೂರಾರು ಮಂದಿ ಹಿಂದೂ ಯುವಕರು ಜಮಾಯಿಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸರ್ವೆ ನೇರೋಳ್ತಡ್ಕದ ಮಹಿಳೆಯೋರ್ವರು ಸೆ.14ರಂದು ಸಂಜೆ ಅಂಗಡಿಗೆ ತಿಂಗಳಾಡಿಯಲ್ಲಿರುವ ಸುಪ‌ರ್ ಬಜಾರ್ ನಲ್ಲಿ ದಿನಸಿ ಖರೀದಿಸಲೆಂದು ಬಂದಿದ್ದರು. ಅಂಗಡಿ ಮಾಲಕ ಹಮೀದ್ ಪಟ್ಟೆ ಚಹಾ […]

ಪುತ್ತೂರು: ಹಿಂದೂ ಮಹಿಳೆ‌ ಮೇಲೆ ಮುಸ್ಲಿಂ ಯುವಕನಿಂದ‌ ಲೈಂಗಿನ ಕಿರುಕುಳ| Read More »

ಕೊಟ್ಟಿಗೆಹಾರ: ಬಸ್, ಕಾರ್ ನಡುವೆ ಅಪಘಾತ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನಲ್ಲಿ ಬಸ್ ಹಾಗೂ ಕಾರ್ ನಡುವೆ ಅಪಘಾತವಾದ ಘಟಣೆ ಸೆ.14ರ ಸಂಜೆ ಸಂಭವಿಸಿದೆ. ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕಾರು, ಧರ್ಮಸ್ಥಳದಿಂದ ಕಡೂರಿಗೆ ಬರುತ್ತಿದ್ದ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಇದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳನ್ನು ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗೆ ಮೂಡಿಗೆರೆಗೆ ರವಾನೆ ಮಾಡಲಾಗಿದೆ. ಇನ್ನೂ ಈ ವೇಳೆ ಒಂದು ಕಿಲೋಮೀಟರ್ ಹೆಚ್ಚು ದೂರ ಟ್ರಾಫಿಕ್ ಜಾಮ್

ಕೊಟ್ಟಿಗೆಹಾರ: ಬಸ್, ಕಾರ್ ನಡುವೆ ಅಪಘಾತ Read More »

ಕೊಟ್ಟಿಗೆಹಾರ: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆ ಕಾಟ

ಸಮಗ್ರ ನ್ಯೂಸ್: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆಗಳು ಕಾಫಿ ತೋಟದಲ್ಲಿ ದಾಂಧಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ದಾಂಧಲೆಗೆ ಪುಷ್ಪ-ರಾಜು ಎಂಬುವರಿಗೆ ಸೇರಿದ ಒಂದು ಎಕರೆ ಕಾಫಿ ತೋಟ ನಾಶವಾಗಿದೆ. ಇನ್ನೂ ಕಳೆದ ಆರು ದಿನದ ಹಿಂದೆ ಅರ್ಜುನ್ ಎಂಬಾತನನ್ನು ಕಾಡಾನೆ ಬಲಿ ಪಡೆದಿತ್ತು. ಮಳೆ ಕಾಟ ಜೊತೆಗೆ ಕಾಡಾನೆ ಕಾಟ ಕೂಡ ಹೆಚ್ಚಾಗಿರುವುದರಿಂದ ಜನರು ಸಂಕಷ್ಟಕ್ಕೀಡಗಿದ್ದಾರೆ. ಈ ಹಿನ್ನಲೆ ಸೂಕ್ತ ಪರಿಹಾರ ನೀಡುವಂತೆ ಸಂತ್ರಸ್ತರು ಮನವಿ

ಕೊಟ್ಟಿಗೆಹಾರ: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆ ಕಾಟ Read More »

ಮಕ್ಕಳ ಕಳ್ಳರಿದ್ದಾರೆ|ಸುಳ್ಳು ವಂದತಿಗಳಿಗೆ ಕಿವಿಗೋಡಬೇಡಿ: ಎಸ್ಪಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯಾದ್ಯಂತ ಮಕ್ಕಳ ಕಳ್ಳತನ ಕುರಿತು ಹರಡಿಸುತ್ತಿರುವ ಸುಳ್ಳು ಸಂಗತಿಗಳಿಗೆ ಕಡಿವಾಣ ಹಾಕಲು ಬೆಳಗಾವಿ ಪೊಲೀಸ್ ಇಲಾಖೆ ಮುಂದಾಗಿದೆ. ಹಳೆಯ ವೀಡಿಯೋ ಬಳಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹರಡುವ ಕೆಲಸ ಮಾಡುವವರಿಗೆ ಎಸ್ಪಿ ಸಂಜೀವ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದು ಯಾರೂ ಸಹ ಅದಕ್ಕೆ ಕಿವಿಗೊಡಬೇಡಿ.‌ ಒಂದು ವೇಳೆ ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದರೆ ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಬೆಳಗಾವಿ

ಮಕ್ಕಳ ಕಳ್ಳರಿದ್ದಾರೆ|ಸುಳ್ಳು ವಂದತಿಗಳಿಗೆ ಕಿವಿಗೋಡಬೇಡಿ: ಎಸ್ಪಿ Read More »

ನನ್ನ ಮಗ ಸತ್ತಿಲ್ಲ, ಆರೋಗ್ಯ ಸ್ಥಿತಿ ಗಂಭೀರ, ರವಿ ತಂದೆ ಸ್ಪಷ್ಟನೆ

ಬೆಂಗಳೂರು: ನನ್ನ ಮಗ ಸತ್ತಿಲ್ಲ. ಅವನ ಸ್ಥಿತಿ ತುಂಬಾನೇ ಗಂಭೀರವಾಗಿದೆ’ ಎಂದು ಮಂಡ್ಯ ರವಿ ತಂದೆ ಮುದ್ದೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ರವಿ ಜಾಂಡೀಸ್​​ನಿಂದ ಬಳಲುತ್ತಿದ್ದಾರೆ. ಜೊತೆಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ರವಿ ಅವರ ಸ್ಥಿತಿ ಗಂಭೀರ ಆಗಿರುವ ಕಾರಣ ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ.

ನನ್ನ ಮಗ ಸತ್ತಿಲ್ಲ, ಆರೋಗ್ಯ ಸ್ಥಿತಿ ಗಂಭೀರ, ರವಿ ತಂದೆ ಸ್ಪಷ್ಟನೆ Read More »

ಕೆಎಂಎಫ್ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ

ಸಮಗ್ರ ನ್ಯೂಸ್ – ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರ ಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ ಆರಂಭಗೊಂಡಿರುವ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಅವರು, ಸಹಕಾರಿ ವಲಯದಲ್ಲಿ ಕರ್ನಾಟಕದ ಕೆಎಂಎಫ್ ಉತ್ತಮ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದರು. ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ ರೈತ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ವಿಶೇಷ

ಕೆಎಂಎಫ್ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ

ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ( ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ ಬಲಪಡಿಸಲು ಮುಂದಾಗುವಂತೆ ಎಐಸಿಸಿ ಆದೇಶದಲ್ಲಿ ಸೂಚಿಸಲಾಗಿದೆ. ಇಷ್ಟು ವರ್ಷಗಳ ಕಾಲ ಜೆಡಿಎಸ್ ನಲ್ಲಿ ಇದ್ದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿಯವರಿಂದ‌ ಅಂತರ ಕಾಯ್ದುಕೊಂಡಿದ್ದರು‌. ಆ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದರು.

ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ Read More »

ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸಭೆಯಲ್ಲಿಯೂ ಈ ವಿಚಾರ ಪ್ರತಿಧ್ವನಿಸಿದೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಕನ್ನಡ ಭಾಷೆ ಕಡ್ಡಾಯಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡ ರಕ್ಷಣೆಗೆ ಸರ್ಕಾರ ಬದ್ಧ. ನೆಲ, ಜಲ ಭಾಷೆ ವಿಚಾರದಲ್ಲಿ ರಾಜಕೀಯ ಮೀರಿ ನಡೆದುಕೊಂಡಿದ್ದೇವೆ. ಕನ್ನಡ ಕಡ್ಡಾಯಗೊಳಿಸಲು ಇದೇ ಅಧಿವೇಶನದಲ್ಲಿ

ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಅವಕಾಶ Read More »

ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 23 ಶಾಸಕರುಗಳ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದು, ಹಿಂದುಳಿದ ಕಲ್ಯಾಣ ಇಲಾಖೆಯಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 23 ಶಾಸಕರುಗಳ ವಿಧಾನಸಭಾ ಕ್ಷೇತ್ರಗಳಿಗೆ ರೂ.93.24 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ವಿವಿಧ ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಟ್ಟಡ ಕಾಮಗಾರಿಗಳನ್ನು ಕೈಗೆತ್ತಿಕಳ್ಳಲು ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆ Read More »

ಸ್ಯಾಂಡಲ್ ವುಡ್ ಗೆ ಮಹಾಘಾತ| ಮಗಳು ಜಾನಕಿ ಖ್ಯಾತಿಯ ರವಿ ಮಂಡ್ಯ ವಿಧಿವಶ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಹೆಸರುವಾಸಿಯಾಗಿದ್ದ ಖ್ಯಾತ ನಟ ಮಗಳು ಜಾನಕಿ ಖ್ಯಾತಿಯ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ರವಿ ಮಂಡ್ಯ ಇಹಲೋಕ ತ್ಯಜಿಸಿದ್ದಾರೆ. ಮಗಳು ಜಾನಕಿ ಧಾರಾವಾಹಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದು, ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

ಸ್ಯಾಂಡಲ್ ವುಡ್ ಗೆ ಮಹಾಘಾತ| ಮಗಳು ಜಾನಕಿ ಖ್ಯಾತಿಯ ರವಿ ಮಂಡ್ಯ ವಿಧಿವಶ Read More »