September 2022

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ|ಕುಟುಂಬದ ಭ್ರಷ್ಟಾಚಾರ ಆರೋಪ ಮರುವಿಚಾರಣೆಗೆ ಆದೇಶಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.‌ ಪ್ರಾಸಿಕ್ಯೂಷನ್​​ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ಸದ್ಯ ಈಗ ಹೈಕೋರ್ಟ್ ವಿಚಾರಣಾ ಕೋರ್ಟ್​​​ ವಜಾ ಆದೇಶ ರದ್ದುಪಡಿಸಿದೆ. ಪ್ರಕರಣ ಮರು ವಿಚಾರಣೆಗೆ ಆದೇಶಿಸಿದೆ. ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್​.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಕೇಸ್ ದಾಖಲಾಗಿತ್ತು. ದೂರುದಾರ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಅಮಿಕಸ್ […]

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ|ಕುಟುಂಬದ ಭ್ರಷ್ಟಾಚಾರ ಆರೋಪ ಮರುವಿಚಾರಣೆಗೆ ಆದೇಶಿಸಿದ ಹೈಕೋರ್ಟ್ Read More »

ರಾಜೀವ್ ಗಾಂಧಿ ಅವರ ಸ್ಮಾರಕದಲ್ಲಿ ಸಸಿ ನೆಟ್ಟು ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ

ಚೆನ್ನೈ: ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು. ಜೋಡೋ ಭಾರತ್‌ ಯಾತ್ರೆ ಚಾಲನೆ ಹಿನ್ನೆಲೆ ನಿನ್ನೆ ರಾತ್ರಿ ಇಲ್ಲಿಗೆ ಆಗಮಿಸಿದ ರಾಹುಲ್ ಗಾಂಧಿ, ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮೊದಲು ರಾಜೀವ ಗಾಂಧಿ ಸ್ಮಾರಕ ಸ್ಥಳದಲ್ಲಿ ರಾಹುಲ್ ಸಸಿ ನೆಟ್ಟರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮಿಳುನಾಡು ಕಾಂಗ್ರೆಸ್ ಕಮಿಟಿ ಮುಖ್ಯಸ್ಥ ಕೆ.ಎಸ್.ಅಳಗಿರಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಜೊತೆಗಿದ್ದರು. ಮೇ 21, 1991 ರಂದು

ರಾಜೀವ್ ಗಾಂಧಿ ಅವರ ಸ್ಮಾರಕದಲ್ಲಿ ಸಸಿ ನೆಟ್ಟು ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ Read More »

ಇಂದು ಸಂಜೆ ಐಟಿ-ಬಿಟಿ ಕಂಪನಿಗಳ ಜೊತೆಗೆ ಸಚಿವ ಅಶ್ವತ್ಥ ನಾರಾಯಣ ಸಭೆ

ಬೆಂಗಳೂರು: ಐಟಿ-ಬಿಟಿ ಕಂಪನಿಗಳು ಮಳೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರು ಸಂಜೆ 5 ಗಂಟೆಗೆ ನಾನಾ ಸಾಫ್ಟ್‌ವೇರ್‌ ಕಂಪನಿಗಳ ಮುಖ್ಯಸ್ಥರ ಹಾಗೂ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು, ನಗರ ಪೊಲೀಸ್‌ ಆಯುಕ್ತರೂ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಸಚಿವ ಅಶ್ವತ್ತ ನಾರಾಯಣ ಈ ಸಭೆಯ ನೇತೃತ್ವವಹಿಸಲಿದ್ದಾರೆ.ಸರ್ಕಾರ ಕರೆದಿರುವ ಈ

ಇಂದು ಸಂಜೆ ಐಟಿ-ಬಿಟಿ ಕಂಪನಿಗಳ ಜೊತೆಗೆ ಸಚಿವ ಅಶ್ವತ್ಥ ನಾರಾಯಣ ಸಭೆ Read More »

ಶಿಕ್ಷಕರಿಗೆ  ಬಯೋಮೆಟ್ರಿಕ್ ಹಾಜರಿ ಕಡ್ಡಾಯ; ಶಾಲೆ ಆರಂಭಕ್ಕೆ 15 ನಿಮಿಷ ಮೊದಲು ಹಾಜರಿರುವಂತೆ ಸೂಚನೆ

ಸಮಗ್ರ ನ್ಯೂಸ್ : ಕೆಲವು ಶಾಲೆಗಳಲ್ಲಿ ಶಿಕ್ಷಕರು ಮಾಹಿತಿ ನೀಡದೆ ಗೈರು ಹಾಜರಾಗುತ್ತಿರುವುದು, ಅಲ್ಲದೆ ತಡವಾಗಿ ಶಾಲೆಗೆ ಬರುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಿ ಕಡ್ಡಾಯಗೊಳಿಸಲಾಗಿದ್ದು, ಜೊತೆಗೆ ಶಾಲೆ ಆರಂಭಕ್ಕೂ 15 ನಿಮಿಷ ಮೊದಲು ಹಾಜರಿರುವಂತೆ ಸೂಚಿಸಲಾಗಿದೆ. ಜೊತೆಗೆ ರಜೆ ಮೇಲೆ ತೆರಳುವಾಗ ಮೇಲಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳುವುದು ಅಗತ್ಯವಾಗಿದೆ. ಶಾಲೆಗಳಲ್ಲಿರುವ ಬಯೋಮೆಟ್ರಿಕ್ ಯಂತ್ರ ಸುಸ್ಥಿತಿಯಲ್ಲಿರುವ ಕುರಿತು ಶಾಲಾ ಮುಖ್ಯಸ್ಥರು ಮತ್ತು ಸ್ಥಳೀಯ ಅಧಿಕಾರಿಗಳು ಪರಿಶೀಲಿಸುತ್ತಿರಬೇಕು ಎಂದು ತಿಳಿಸಲಾಗಿದ್ದು,

ಶಿಕ್ಷಕರಿಗೆ  ಬಯೋಮೆಟ್ರಿಕ್ ಹಾಜರಿ ಕಡ್ಡಾಯ; ಶಾಲೆ ಆರಂಭಕ್ಕೆ 15 ನಿಮಿಷ ಮೊದಲು ಹಾಜರಿರುವಂತೆ ಸೂಚನೆ Read More »

ವೈದ್ಯಕೀಯ ಶಿಕ್ಷಣ ಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ : 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು “ಕೇಂದ್ರೀಯ ಸೈನಿಕ ಮಂಡಳಿ” ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಚಿಸುವವರು, ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶದ 20 ದಿನಗಳೊಳಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರ ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ನಂತರ ಆನ್‍ಲೈನ್ ಮೂಲಕ ಕೆ.ಎಸ್.ಬಿ

ವೈದ್ಯಕೀಯ ಶಿಕ್ಷಣ ಕ್ಕಾಗಿ ಅರ್ಜಿ ಆಹ್ವಾನ Read More »

ಬಾಲಕನಿಗೆ ಶಾಲೆಯಲ್ಲಿ ಹಾವು ಕಚ್ಚಿ ಗಂಭೀರ ಗಾಯ, ಆಸ್ಪತ್ರೆ ದಾಖಲು

ಸಮಗ್ರ ನ್ಯೂಸ್: ಶಾಲೆಯಲ್ಲಿ ಹಾವು ಕಚ್ಚಿ 12 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಅಲ್ಫಾಝ್ ಸರ್ತಾಝ್ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ 3:30ರ ಸುಮಾರಿಗೆ ಈ ಘಟನೆ ನಡೆದಿದೆ.‌ ಮುರ್ಡೇಶ್ವರ ನ್ಯಾಷನಲ್ ಕಾಲನಿಯಲ್ಲಿರುವ ಸರ್ಕಾರಿ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ತರಗತಿಯಲ್ಲಿದ್ದ ವೇಳೆ ಕಿಟಕಿಯ ಹೊರಗೆ ಪೆನ್ಸಿಲ್‌ ಬಿದ್ದಿದ್ದು, ಅದನ್ನು ತರಲು ಹೊರಗೆ ಹೋಗುತ್ತಿದ್ದ ವೇಳೆ ಹಾವು ಬಾಲಕನ ಕಾಲಿಗೆ ಕಚ್ಚಿತು ಎಂದು ತಿಳಿದುಬಂದಿದೆ. ಕೂಡಲೇ ವಿದ್ಯಾರ್ಥಿಯನ್ನು ಮುರ್ಡೇಶ್ವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಭಟ್ಕಳ

ಬಾಲಕನಿಗೆ ಶಾಲೆಯಲ್ಲಿ ಹಾವು ಕಚ್ಚಿ ಗಂಭೀರ ಗಾಯ, ಆಸ್ಪತ್ರೆ ದಾಖಲು Read More »

ಮಂಗಳೂರು; ಶಾಲಾ ಬಸ್ ಚಾಲಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಕೇಸ್ ದಾಖಲು

ಮಂಗಳೂರು: 5ನೇ ತರಗತಿ ವಿದ್ಯಾರ್ಥಿನಿಗೆ , ಶಾಲಾ ಬಸ್‌ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ , 5 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ ಮೂರು ತಿಂಗಳು ಸೆರೆಮನೆ ಹಾಗೂ ಮತ್ತೊಂದು ಕಾಯ್ದೆಯಡಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 1,000 ರೂ. ದಂಡ, ತಪ್ಪಿದಲ್ಲಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಮಂಗಳೂರಿನ ದ.ಕ. ಜಿಲ್ಲಾ ಫಾಸ್ಟ್‌ ಟ್ರಾಕ್‌ ನ್ಯಾಯಾಲಯ ಪ್ರಕಟಿಸಿ ಮಂಗಳವಾರ ಆದೇಶ ನೀಡಿದೆ. ಆರೋಪಿಯಾಗಿದ್ದ

ಮಂಗಳೂರು; ಶಾಲಾ ಬಸ್ ಚಾಲಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಕೇಸ್ ದಾಖಲು Read More »

ಮೂರುವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿ ಅಮಾನವೀಯ ಕೃತ್ಯ ಎಸಗಿದ ತಾಯಿ

ಸಮಗ್ರ ನ್ಯೂಸ್: ಮೂರೂವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿದ ಘಟನೆಯೊಂದು ಪಂಜಾಬ್ ನಲ್ಲಿ ನಡೆದಿದೆ. ಪತಿಯೊಂದಿಗೆ ಭಿನ್ನಾಭಿಪ್ರಾಯಗಳಿದ್ದ ಕಾರಣ ಮಹಿಳೆ ತವರಿನಲ್ಲಿ ಕಳೆದ ಎರಡು ವರ್ಷಗಳಿಂದ ವಾಸ್ತವ್ಯವಿದ್ದಳು. ಕೌಟುಂಬಿಕ ಕಲಹದಿಂದಾಗಿ ಆಕೆ ಖಿನ್ನತೆಗೊಳಗಾಗಿದ್ದಳು. ಇದೀಗ ಮಗು ಒಂದೇ ಸಮ ಅಳುತ್ತಿದ್ದುದನ್ನು ನೋಡಿ ಹತಾಶೆಯಿಂದ ಬೆಂಕಿ ಹಚ್ಚಿದ್ದಾಳೆ. ಇದೀಗ ಮಗು ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ತಾಯಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೂರುವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿ ಅಮಾನವೀಯ ಕೃತ್ಯ ಎಸಗಿದ ತಾಯಿ Read More »

ಸುಳ್ಯ: ಆಕಸ್ಮಿಕ ಬೆಂಕಿ ಅವಘಡದಲ್ಲಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಸುಧಾಕರ್(45) ಎಂದು ಗುರುತಿಸಲಾಗಿದೆ. ದೇವರಿಗೆ ಹಚ್ಚಿದ್ದ ದೀಪ ಸುಧಾಕರವರು ಮಲಗಿದ್ದ ಹಾಸಿಗೆಗೆ ತಗುಲಿ ಬೆಂಕಿ ಹಚ್ಚಿ ಕೊಂಡಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದೆ ಮತ್ತು ಸುಧಾಕರವರು ಅನಾರೋಗ್ಯದಿಂದ ಕಾರಣ ಎದ್ದು ಓಡಾಡಲು ಸಾದ್ಯವಾಗದೆ ಬೆಂಕಿ ಅವರ ದೆಹಕ್ಕೂ ತಗುಲಿ ಸಾವನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಆಕಸ್ಮಿಕ ಬೆಂಕಿ ಅವಘಡದಲ್ಲಿ ವ್ಯಕ್ತಿ ಸಾವು Read More »

ಶಾಲಾ‌ ಶೌಚಾಲಯದಲ್ಲೇ ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ| ಪೆನ್ನು ಬಳಸಿ ಹೊಕ್ಕುಳ ಬಳ್ಳಿ ಕತ್ತರಿಸಿಕೊಂಡಳು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಚಿದಂಬರಂ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶೌಚಾಲಯದ ಬಳಿ ಶಿಶುವಿನ ಶವ ಪತ್ತೆಯಾದ ನಾಲ್ಕು ದಿನಗಳ ಬಳಿಕ, ಶಾಲೆಯ 11 ನೇ ತರಗತಿಯ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಳು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. 16 ವರ್ಷದ ಬಾಲಕಿಯನ್ನು ಪೊಲೀಸರು ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಅಪ್ರಾಪ್ತ ಬಾಲಕಿಯನ್ನು ಗರ್ಭವತಿ ಮಾಡಿದ ವ್ಯಕ್ತಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಗ್ರಾಮಸ್ಥರಲ್ಲಿ ಆಘಾತ

ಶಾಲಾ‌ ಶೌಚಾಲಯದಲ್ಲೇ ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ| ಪೆನ್ನು ಬಳಸಿ ಹೊಕ್ಕುಳ ಬಳ್ಳಿ ಕತ್ತರಿಸಿಕೊಂಡಳು Read More »