September 2022

ವಿಶ್ವಾಸ ಗೆದ್ದ ಕೇಜ್ರಿವಾಲ್| ತಪ್ಪಿದ ಬಿಜೆಪಿ ಲೆಕ್ಕಾಚಾರ

ಸಮಗ್ರ ನ್ಯೂಸ್: ಅಬಕಾರಿ ನೀತಿಯ ಕಾರಣಕ್ಕಾಗಿ ಸಂಕಷ್ಟಕ್ಕೆ ಸಿಲುಕಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ 58 ಮತ ಗಳಿಸುವ ಮೂಲಕ ಗೆದ್ದು ಬೀಗಿದ್ದಾರೆ. ಎಪ್ಪತ್ತು ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಗಳಿಸಿದ್ದು ಈ ಪೈಕಿ 58 ಮತಗಳು ಅವರಿಗೆ ಲಭಿಸಿವೆ. ತಮ್ಮ ಪಕ್ಷದ ಸದಸ್ಯರನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಈ ಹಿಂದೆ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದು, ಹೀಗಾಗಿ […]

ವಿಶ್ವಾಸ ಗೆದ್ದ ಕೇಜ್ರಿವಾಲ್| ತಪ್ಪಿದ ಬಿಜೆಪಿ ಲೆಕ್ಕಾಚಾರ Read More »

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ

ರಕ್ತಸ್ರಾವದಿಂದ ಹಸು ಸಾವು 29 ವರ್ಷದ ವ್ಯಕ್ತಿ ಬಂಧನ ಕೋಲ್ಕತ್ತಾ: ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ 29 ವರ್ಷದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯ ನಮ್‍ಖಾನಾ ಬ್ಲಾಕ್‍ನ ಉತ್ತರ ಚಂದನ್‍ಪಿಡಿ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಪ್ರದ್ಯುತ್ ಭೂಯಾ ಎಂದು ಗುರುತಿಸಲಾಗಿದೆ. ಇದೀಗ ಗರ್ಭಿಣಿ ಹಸುವಿನ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಕೆಲವು ದಿನಗಳ ಹಿಂದೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಪ್ರದ್ಯುತ್, ತಮ್ಮ ಮನೆಯ ಹಿಂದೆ ಇರುವ ದನದ

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ Read More »

ಎಲ್ ಪಿಜಿ ಸಿಲಿಂಡರ್ ಬೆಲೆ 91.5 ರೂ.ಇಳಿಕೆ

ನವದೆಹಲಿ : ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಕಡಿಮೆ ಮಾಡಿದ್ದು, ಇಂಡಿಯನ್ ಆಯಿಲ್ ಸೆಪ್ಟೆಂಬರ್ 1 ರಂದು ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಈ ಮೊದಲು ಇದರ ಬೆಲೆ 1976.5 ರೂ. ಇತ್ತು. ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗುತ್ತಿರುವುದು ಇದು ಸತತ ಐದನೇ ಬಾರಿ. ಮೇ ತಿಂಗಳಲ್ಲಿ

ಎಲ್ ಪಿಜಿ ಸಿಲಿಂಡರ್ ಬೆಲೆ 91.5 ರೂ.ಇಳಿಕೆ Read More »

ಮಂಗಳೂರು ರೈಲಿನಲ್ಲಿ ಭಾರೀ ರಾಬರಿ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ರೈಲಿನಲ್ಲಿ ಬರುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ನಡೆದಿದೆ. ಕಾರವಾದ ಮೂಲದ ಶಿಕ್ಷಕ ರಮೇಶ್‌ ಮತ್ತು ನಿರ್ಮಲಾ ದಂಪತಿ ರೈಲಿನಲ್ಲಿ ರಾತ್ರಿ ಕಾರವಾರಕ್ಕೆ ರೈಲಿನಲ್ಲಿ ಹೊರಟಿದ್ದರು.ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗ್‌ ತೆಗೆದುಕೊಂಡು ಪರಾರಿಯಾಗಿದ್ದಾನೆ. ನಂತರ ಆತ ರೈಲಿನಿಂದ ಹಾರಲು ಯತ್ನಿಸಿದ್ದಾನೆ. ಕೂಡಲೇ ಮಹಿಳೆ ತುರ್ತು ಸಂದರ್ಭ ರೈಲು ನಿಲ್ಲಿಸುವ ಚೈನ್‌ ಎಳೆದಿದ್ದಾರೆ. ಅದರಂತೆ ರೈಲಿನ ವೇಗ

ಮಂಗಳೂರು ರೈಲಿನಲ್ಲಿ ಭಾರೀ ರಾಬರಿ Read More »

ಏಕರೂಪದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ : ದೇಶಾದ್ಯಂತ ಏಕರೂಪದಲ್ಲಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಇದಕ್ಕಾಗಿ, ಹೊಸ ಪರೀಕ್ಷಾ ನಿಯಂತ್ರಕ ಸಂಸ್ಥೆ ಪರಾಖ್ (PARAKH) ಅನ್ನು ರಚಿಸಲಾಗಿದೆ. ದೇಶಾದ್ಯಂತ ಬೋರ್ಡ್ ಪರೀಕ್ಷೆಗಳಲ್ಲಿ ಸಮಾನತೆಯನ್ನು ತರುವುದು. 10 ಮತ್ತು 12 ನೇ ತರಗತಿಯ ಮಟ್ಟದಲ್ಲಿ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲು ಏಕರೂಪದ ಚೌಕಟ್ಟನ್ನು ರಚಿಸುವುದು. ಪ್ರಸ್ತುತ, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಹೊರತುಪಡಿಸಿ, ದೇಶದ ವಿವಿಧ ರಾಜ್ಯಗಳಲ್ಲಿ ರಾಜ್ಯ ಬೋರ್ಡ್ ಪರೀಕ್ಷೆಗಳ ಮಟ್ಟವು ವಿಭಿನ್ನವಾಗಿದೆ. ಇದು ಮಕ್ಕಳ ಅಂಕಗಳಲ್ಲಿ ದೊಡ್ಡ ವ್ಯತ್ಯಾಸವನ್ನು

ಏಕರೂಪದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ Read More »

ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ| ಸುಮೋಟೋ ಕೇಸ್ ದಾಖಲಿಸಿದ ಮಕ್ಕಳ ಹಕ್ಕು ರಕ್ಷಣಾ ಆಯೋಗ

ಸಮಗ್ರ ನ್ಯೂಸ್: ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ

ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ| ಸುಮೋಟೋ ಕೇಸ್ ದಾಖಲಿಸಿದ ಮಕ್ಕಳ ಹಕ್ಕು ರಕ್ಷಣಾ ಆಯೋಗ Read More »

ಕಡಿಮೆ ಅಂಕ ನೀಡಿದ್ದಕ್ಕೆ ಸಭೆ ನಡೆಸುವ ನೆಪವೊಡ್ಡಿ ಗುರುಗಳನ್ನೇ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ವಿದ್ಯಾರ್ಥಿ

ಸಮಗ್ರ ನ್ಯೂಸ್ ​:  ಜಾರ್ಖಂಡ್​ನ ವಿದ್ಯಾರ್ಥಿಗಳು ಮರಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಅನುತೀರ್ಣ ಆದ ವಿದ್ಯಾರ್ಥಿಗಳು ಸಭೆ ನಡೆಸುವ ನೆಪದಲ್ಲಿ ಶಿಕ್ಷಕರನ್ನು ಕರೆದು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಜಾರ್ಖಂಡ್​ನ ದುಮ್ಕಾದ ಹಳ್ಳಿಯೊಂದರ ಶಾಲಾ ವಿದ್ಯಾರ್ಥಿಗಳು ಈ ನೀಚ ಕೃತ್ಯ ಎಸಗಿದವರು. ತಮಗೆ ಶಿಕ್ಷಕರು ಕಡಿಮೆ ಅಂಕಗಳನ್ನು ನೀಡಿದರು ಎಂದು ಎಲ್ಲ ಶಿಕ್ಷಕರನ್ನು ಕರೆದು ಬಳಿಕ ಅವರನ್ನು ಮರಕ್ಕೆ ಕಟ್ಟಿಹಾಕಿದ್ದಾರೆ. ನಂತರ ಎಲ್ಲರ ಮೇಲೆ ಹಲ್ಲೆ ನಡೆಸಿದ್ದರಿಂದ ಗುರುಗಳು

ಕಡಿಮೆ ಅಂಕ ನೀಡಿದ್ದಕ್ಕೆ ಸಭೆ ನಡೆಸುವ ನೆಪವೊಡ್ಡಿ ಗುರುಗಳನ್ನೇ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ವಿದ್ಯಾರ್ಥಿ Read More »

ಡಿಕೆ ಶಿವಕುಮಾರ್ ನಿವಾಸಕ್ಕೆ ಮಧ್ಯಪ್ರದೇಶದ ಮಾಜಿ ಸಿಎಂ ಭೇಟಿ

ಸಮಗ್ರ ನ್ಯೂಸ್ : ಸದಾಶಿವನಗರದ ತಮ್ಮ ನಿವಾಸಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಭಾರತ್ ಜೋಡೋ ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ, ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಸಂಸದ ಡಿಕೆ ಸುರೇಶ್, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಕೆಪಿಸಿಸಿ

ಡಿಕೆ ಶಿವಕುಮಾರ್ ನಿವಾಸಕ್ಕೆ ಮಧ್ಯಪ್ರದೇಶದ ಮಾಜಿ ಸಿಎಂ ಭೇಟಿ Read More »

ನರೇಂದ್ರ ಮೋದಿ ಮಂಗಳೂರು ಭೇಟಿ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ, ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 2ರ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿಯೂ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ

ನರೇಂದ್ರ ಮೋದಿ ಮಂಗಳೂರು ಭೇಟಿ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕಾಸರಗೋಡು: ರೈಲು ಹಳಿಯಲ್ಲಿ ಕಬ್ಬಿಣದ ಬೀಮ್ ಇಟ್ಟ ಮಹಿಳೆ ಬಂಧನ| ಈಕೆಯ ಉದ್ದೇಶ ಕೇಳಿ ರೈಲ್ವೆ ಪೊಲೀಸರೇ ಸುಸ್ತು

ಸಮಗ್ರ ನ್ಯೂಸ್: ರೈಲು ಹಳಿಯಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್‌ ಇಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಮಹಿಳೆಯೋರ್ವಳನ್ನು ರೈಲ್ವೆ ಭದ್ರತಾ ಪಡೆ ಹಾಗೂ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೇಕಲದ ಕ್ವಾಟರ್ಸ್‌ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ ( 22) ಬಂಧಿತ ಮಹಿಳೆ. ಗುಜರಿ ಹೆಕ್ಕುವ ಕಾಯಕ ನಡೆಸುತ್ತಿದ್ದ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳಿನಿಂದ ಸಿಮೆಂಟ್ ಬೇರ್ಪಡುವ ಉದ್ದೇಶದಿಂದ ರೈಲು ಹಳಿಯಲ್ಲಿ ಇಟ್ಟಿದ್ದಾಗಿ ವಿಚಾರಣೆ ವೇಳೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ಹಳಿಯಲ್ಲಿ ನಡೆದುಕೊಂಡು

ಕಾಸರಗೋಡು: ರೈಲು ಹಳಿಯಲ್ಲಿ ಕಬ್ಬಿಣದ ಬೀಮ್ ಇಟ್ಟ ಮಹಿಳೆ ಬಂಧನ| ಈಕೆಯ ಉದ್ದೇಶ ಕೇಳಿ ರೈಲ್ವೆ ಪೊಲೀಸರೇ ಸುಸ್ತು Read More »