ಮಂಗಳೂರು: ಕಾನ್ಸ್ ಟೇಬಲ್ ಗೆ ಡಿಕ್ಕಿ ಹೊಡೆದ ಕಾರು ಪರಾರಿ

ಸಮಗ್ರ ನ್ಯೂಸ್: ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಕಾನ್ಸ್​ಟೇಬಲ್​ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಇಂದು ಸಂಜೆ ಸಂಭವಿಸಿದೆ.

Ad Widget ... ..

ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಕಾನ್ಸ್​ಟೇಬಲ್. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್ ವಾಹನದಲ್ಲಿ ಚಾಲಕನಾಗಿದ್ದ ಇವರು ಉಳ್ಳಾಲಬೈಲ್ ಬಳಿ ತಪಾಸಣೆಗೈಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ.

Ad Widget

ತೊಕ್ಕೊಟ್ಟು ಕಡೆಯಿಂದ ಉಳ್ಳಾಲ ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಸ್ವಿಫ್ಟ್ ಕಾರನ್ನು ತಡೆಯಲು ಯತ್ನಿಸಿದಾಗ, ಚಾಲಕ ಕಾರನ್ನು ನಿಲ್ಲಿಸದೇ ಕಾನ್ಸ್​ಟೇಬಲ್ ಲೋಕೇಶ್​ಗೆ ಗುದ್ದಿ ಪರಾರಿಯಾಗಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಲೋಕೇಶ್ ಅವರ ತಲೆ ರಸ್ತೆಯ ವಿಭಜಕಕ್ಕೆ ಬಡಿದು ರಕ್ತಸ್ರಾವ ಉಂಟಾಗಿದೆ. ತಕ್ಷಣ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *