ಸಮಗ್ರ ನ್ಯೂಸ್: ಭಾರತ ಜೋಡೊ ಯಾತ್ರೆ ತಮಿಳುನಾಡು ಮತ್ತು ಕೇರಳವನ್ನು ಮುಗಿಸಿ ಕರ್ನಾಟಕಕ್ಕೆ ಬಂದು ತಲುಪಿದೆ. ಕಳೆದೆರಡು ದಿನಗಳಿಂದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಭಾನುವಾರ ಮೈಸೂರು ಜಿಲ್ಲೆಯ ಬಂಡಿಪಾಳ್ಯ ಸಮೀಪ ರಾಹುಲ್ ಗಾಂಧಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು.
ವೇದಿಕೆಯ ಮೇಲೆ ರಾಹುಲ್ ಗಾಂಧಿ ಮಾತನಾಡುವ ವೇಳೆ ಜೋರು ಮಳೆ ಆರಂಭವಾಗಿದೆ. ಆದರೆ ಇದಕ್ಕೆ ತಲೆ ಕೆಡಿಸಿಕೊಳ್ಳದ ರಾಹುಲ್ ಗಾಂಧಿ ಮಳೆಯಲ್ಲೇ ಮಾತು ಮುಂದುವರೆಸಿದ್ದಾರೆ. ಭಾರತ ಜೋಡೊ ಯಾತ್ರೆ ಮಳೆ – ಗಾಳಿ ಅಥವಾ ಸುನಾಮಿ ಬಂದರೂ ನಿಲ್ಲುವುದಿಲ್ಲ. ಏನೇ ಬಂದರೂ ಭಾರತದ ಏಕತೆಗಾಗಿ ಯಾತ್ರೆ ಮುಂದುವರೆಯುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿ ಜೋರು ಮಳೆಯಲ್ಲಿ ನಿಂತು ಮಾತನಾಡುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿ ಮಾತನಾಡಿರುವ ವಿಡಿಯೋವನ್ನು ಕಾಂಗ್ರೆಸ್ ಪಕ್ಷ ಮತ್ತು ಪಕ್ಷದ ನಾಯಕರು ಶೇರ್ ಮಾಡಿದ್ಧಾರೆ. ಈ ವಿಡಿಯೋ ವೈರಲ್ ಆಗಿದ್ದು ಪರ ಮತ್ತು ವಿರೋಧದ ಚರ್ಚೆಗೆ ಕಾರಣವಾಗಿದೆ. ಮಾಜಿ ಸಂಸದೆ, ನಟಿ ರಮ್ಯಾ ಅವರು ಪ್ರತಿಕ್ರಿಯೆ ನೀಡಿದ್ದು, ರಾಹುಲ್ ಗಾಂಧಿ ಮಳೆಯಲ್ಲಿ ಭಾಷಣ ಮಾಡುತ್ತಿರುವುದು ಸುದ್ದಿಯಲ್ಲ. ಆದರೆ ರಾಹುಲ್ ಗಾಂಧಿ ಮಾತನ್ನು ಅಂತಾ ಮಳೆಯಲ್ಲೂ ನಿಂತು ಜನ ಕೇಳಿಸಿಕೊಳ್ಳುತ್ತಿದ್ದಾರಲ್ಲ ಅದು ನಿಜವಾದ ಸುದ್ದಿ ಎಂದು ಹೇಳಿದ್ದಾರೆ. ಈ ಮೂಲಕ ರಾಹುಲ್ ಭಾರತ್ ಜೋಡೊ ಯಾತ್ರೆ ಯಶಸ್ಸು ಕಂಡಿದೆ ಮತ್ತು ಜನ ರಾಹುಲ್ ಗಾಂಧಿ ಅವರ ಮಾತನ್ನು ಮಳೆಯಲ್ಲೂ ನಿಂತು ಆಲಿಸುತ್ತಿದ್ದಾರೆ ಎಂದು ರಮ್ಯಾ ಹೇಳಿದ್ದಾರೆ.
Rahul Ghandi has all the qualities , that a good leader should have . He is genuinely
very much concerned about Nation’s future , it’s image internationally and welfare of all people .