Ad Widget .

ಆಯುಧ ಪೂಜೆ, ಮಹಾನವಮಿಗೆ ಕಳೆಗಟ್ಟಿದ ಮೈಸೂರು| ಸಾಂಸ್ಕೃತಿಕ ನಗರಿಯಲ್ಲಿ ಪೂಜಾ ವಿಧಿವಿಧಾನಗಳಿಗೆ ಚಾಲನೆ

ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತಾದ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಅರಮನೆಯಲ್ಲಿ ಮುಂಜಾನೆ 5.30 ರಿಂದಲೇ ಆಯುಧಪೂಜೆ ಕೈಂಕರ್ಯಗಳು ಆರಂಭವಾಗಿದ್ದು, ಮಧ್ಯಾಹ್ನ1.30 ರವರೆಗೆ ಪೂಜೆಗಳು ನಡೆಯಲಿವೆ. ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜಾ ವಿಧಾನಗಳನ್ನು ನಡೆಸುತ್ತಿದ್ದಾರೆ.

Ad Widget . Ad Widget .

ಬೆಳಗ್ಗೆ 6 ಗಂಟೆಗೆ ಚಂಡಿ ಹೋಮ, ಪೂಜಾ ವಿಧಿ ವಿಧಾನ ಆರಂಭವಾಗಿದೆ. 07.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಹಸು ಹಾಗೂ ಪಟ್ಟದ ಕುದುರೆ ಆಗಮನವಾಗಲಿದೆ. 8.10ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆಯಾಗಲಿದೆ. 9 ಗಂಟೆಗೆ ಚಂಡಿ ಹೋಮ ಪೂರ್ಣಾಹುತಿ ನಡೆಯಲಿದೆ.

Ad Widget . Ad Widget .

9.25ಕ್ಕೆ ಪೂಜೆ ಸಲ್ಲಿಸಿ ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆ ಕಲ್ಯಾಣ ಮಂಟಪಕ್ಕೆ ಆಯುಧಗಳನ್ನು ವಾಪಸ್​ ತರಲಾಗುತ್ತದೆ. ಬಳಿಕ 11.02 ರಿಂದ 11.25ರ ಶುಭ ಮುಹೂರ್ತದಲ್ಲಿ ರಾಜ ಪುರೋಹಿತರ ಮಾರ್ಗದರ್ಶನದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ಆಯುಧಗಳಿಗೆ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ಸಿಂಹಾಸನ, ಪಟ್ಟದ ಆನೆ, ಫಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸುಗಳಿಗೆ ಯದುವೀರ್​ ಪೂಜೆ ಸಲ್ಲಿಸಲಿದ್ದಾರೆ. ಅಲ್ಲದೆ, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಿದ್ದಾರೆ.

Leave a Comment

Your email address will not be published. Required fields are marked *