ಸಮಗ್ರ ನ್ಯೂಸ್: ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ.
ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ. ಚಡ್ಡಿಗಳೇ ಎಚ್ಚರ -ಪಿಎಫ್‍ಐ ನಾವು ಮರಳಿ ಬರುತ್ತೇವೆ ಅಂತಾ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.

ಯಾರೋ ಕಿಡಿಗೇಡಿಗಳು ತಡ ರಾತ್ರಿ ರಸ್ತೆಯಲ್ಲಿ ಈ ರೀತಿ ಬರೆದಿದ್ದಾರೆ. ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು,ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
