ಸಮಗ್ರ ನ್ಯೂಸ್: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ದನದ ಕೊಟ್ಟಿಗೆಗೆ ಕರೆದೊಯ್ದು ಹತ್ತು ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬದೌನ್ನಲ್ಲಿ ನಡೆದಿದೆ.
ವಿಷಯ ತಿಳಿದ ಕುಟುಂಬಸ್ಥರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಉಘೈಟಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 6 ವರ್ಷದ ತಮ್ಮ ಮಗಳು ಮನೆಯ ಆವರಣದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದ 10 ವರ್ಷದ ಬಾಲಕ ಆಕೆಯನ್ನು ಅಲ್ಲಿಂದ ಕರೆದುಕೊಂಡು ದನದ ಕೊಟ್ಟಿಗೆಗೆ ಹೋಗಿ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.
ಬಳಿಕ ತಮ್ಮ ಮಗಳು ಅಳುತ್ತಾ ಮನೆಗೆ ಬಂದಾಗ, ಆಕೆಯ ಬಟ್ಟೆ ಮತ್ತೆ ಇತ್ಯಾದಿಗಳನ್ನು ಗಮನಿಸಿ ನಮಗೆ ಅರ್ಥವಾಯಿತು ಎಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.