ರಾಜ್ಯದಲ್ಲಿ ಮತ್ತೆ ಮಳೆ; ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕೆಲದಿನಗಳಿಂದ ಕೊಂಚ ಕಡಿಮೆಯಾಗಿದ್ದ ಮಳೆ‌ ಮತ್ತೆ ಭಾರತೀಯ ಬಿರುಸು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ.

Ad Widget ... ..

ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ನಿಧಾನವಾಗಲಿದೆ ಎಂದು ಐಎಂಡಿ ಹೇಳಿದೆ.

Ad Widget

ಮಳೆಯ ಹೊರತಾಗಿ, ಮೋಡ ಕವಿದ ವಾತಾವರಣದಿಂದಾಗಿ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೀತ ಹವಾಮಾನ ಇರಲಿದೆ.

ಸುತ್ತಮುತ್ತಲಿನ ಜಿಲ್ಲೆಗಳಾದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Comment

Your email address will not be published. Required fields are marked *