Ad Widget .

ವಿಧಾನಸಭಾ ಚುನಾವಣೆ ಹಿನ್ನಲೆ| ಕರಾವಳಿ ಮೇಲೆ ಕಣ್ಣಿಟ್ಟ ಪ್ರಮೋದ್ ಮುತಾಲಿಕ್| ಉಡುಪಿ, ದ.ಕ ದಲ್ಲಿ ಸ್ಪರ್ಧೆ ಸಾಧ್ಯತೆ

ಸಮಗ್ರ ನ್ಯೂಸ್: ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಹೆಸರಾಗಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಹದಿಮೂರು ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

Ad Widget . Ad Widget .

ಇದಕ್ಕೆ ಪುಷ್ಟಿ ನೀಡುವಂತೆ ಪ್ರಮೋದ್ ಮುತಾಲಿಕ್ ನವರಾತ್ರಿ ಸಂದರ್ಭದಲ್ಲಿ ಉಡುಪಿ ಪ್ರವಾಸ ಕೈಗೊಂಡಿದ್ದ ವೇಳೆ ಉಡುಪಿ ಜಿಲ್ಲೆಯಿಂದಲೇ ಕಣಕ್ಕಿಳಿಯಬೇಕೆಂದು ಕಾರ್ಯಕರ್ತರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕರ್ತರಿಂದಲೂ ಇದೆ ಒತ್ತಾಯ ಕೇಳಿಬಂದಿದೆ.

Ad Widget . Ad Widget .

ಪ್ರಮೋದ್ ಮುತಾಲಿಕ್ ತಮ್ಮ ಪ್ರವಾಸದ ವೇಳೆ ಹತ್ತಕ್ಕೂ ಅಧಿಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ಕಾರ್ಯಕರ್ತರ ಬೇಡಿಕೆಗೆ ಸಮ್ಮತಿ ಸೂಚಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರಮೋದ್ ಮುತಾಲಿಕ್ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಒಲವು ತೋರಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *