ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗಿಪ್ಟ್| ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಹಾಗೂ ದೀಪಾವಳಿ ಗಿಫ್ಟ್ ಎನ್ನುವಂತೆ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಲಾಗಿತ್ತು. ಇದೀಗ ಸಿಎಂ ಬೊಮ್ಮಾಯಿಯವರು ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ.

Ad Widget ... .. Ad Widget .

ಈ ಕುರಿತಂತೆ ಸಿಎಂ ಟ್ವಿಟ್ಟರ್ ಖಾತೆಯಿಂದ ಟ್ಟಿಟ್ ಮಾಡಿ ಮಾಹಿತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದೆ.

Ad Widget

Leave a Comment

Your email address will not be published. Required fields are marked *