Ad Widget .

ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಅಧಿದೇವತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಮಾಡಿರುವ ಮತ್ತೊಂದು ನಿಯಮ ಈಗ ವಿವಾದಕ್ಕೆ ಕಾರಣವಾಗಿದೆ.

Ad Widget . Ad Widget .

ಪ್ರತಿನಿತ್ಯ ಸಾವಿರಾರು ಭಕ್ತರು ಯಾವುದೇ ನೂಕು ನುಗ್ಗಲು ಇಲ್ಲದೇ ಸಾವಕಾಶವಾಗಿ ಪಡೆಯುತ್ತಿದ್ದ ದುರ್ಗೆಯ ದರ್ಶನಕ್ಕೆ ಈಗ ಮೊತ್ತ ವಿಧಿಸಲಾಗಿದೆ. ಕ್ಷೇತ್ರದಲ್ಲಿ ಇದೀಗ ಶೀಘ್ರ ದರ್ಶನ ವ್ಯವಸ್ಥೆಯನ್ನು ಜಾರಿ ಮಾಡಲಾಗಿದ್ದು, ಶೀಘ್ರ ದರ್ಶನ ಪಡೆಯುವ ಪ್ರತಿಯೋರ್ವ ಭಕ್ತನು ನೂರು ರೂಪಾಯಿ ಪಾವತಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬಹುದಾಗಿದೆ.

Ad Widget . Ad Widget .

ನವರಾತ್ರಿಯ ಬಳಿಕ ಈ ಹೊಸ ನಿಯಮವನ್ನು ಕ್ಷೇತ್ರದಲ್ಲಿ ತರಲಾಗಿದೆ. ಸಾವಿರಾರು ಭಕ್ತರು ಸೇರಿದರೂ ಯಾವುದೇ ಗೊಂದಲ, ನೂಕು ನುಗ್ಗಲು ಆಗದಂತೆ ನಡೆಯುತ್ತಿದ್ದ ವ್ಯವಸ್ಥೆಗೆ ಈಗ ಶೀಘ್ರ ದರ್ಶನ ಎಂಬುದನ್ನು ಸೇರಿಸಿ ನೂರು ರೂಪಾಯಿ ಮೊತ್ತ ಹಾಕಲಾಗುತ್ತಿದೆ. ಈ ಹಿಂದೆ ಪಾರ್ಕಿಂಗ್ ಮೊತ್ತವನ್ನು ಹಾಕಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ ಮಾಡಿತ್ತು. ಈ ನಿಯಮಕ್ಕೆ ಕ್ಷೇತ್ರದ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಭಕ್ತರ ವಿರೋಧ ಹಿನ್ನಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಈ ನಿರ್ಧಾರವನ್ನು ಹಿಂಪಡೆದಿತ್ತು. ಈಗ ಶೀಘ್ರ ದರ್ಶನದ ಹೆಸರಿನಲ್ಲಿ ಮತ್ತೆ ಹಣ ಮಾಡುವ ದಂಧೆಗೆ ಎಗ್ಗಿಲ್ಲದೇ ನಡೆಯುತ್ತಿದೆ ಎನ್ನುವುದು ಕ್ಷೇತ್ರದ ಭಕ್ತರ ಅಸಮಾಧಾನವಾಗಿದೆ.

Leave a Comment

Your email address will not be published. Required fields are marked *