ಸಮಗ್ರ ನ್ಯೂಸ್: ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ, ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು.
ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್ಐಎ ಮತ್ತು ಪೊಲೀಸರು ನಡೆಸಿದ ದಾಳಿಯಲ್ಲಿ ಅನೇಕರನ್ನು ಬಂಧಿಸಲಾಗಿದ್ದು, ಕೇಂದ್ರ ಸರ್ಕಾರ ಐದು ವರ್ಷ ಸಂಘಟನೆಯನ್ನು ನಿಷೇಧಿಸಿದೆ. ಅಲ್ಲದೆ ಬಂಧಿತ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದ್ದು,
ಆಘಾತಕಾರಿ ಮಾಹಿತಿಗಳು ಒಂದೊಂದಾಗಿಯೇ ಹೊರಬೀಳುತ್ತಿದೆ. ಈ ಪೈಕಿ ಕಾರ್ಯಕರ್ತರಿಗೆ ಉಗ್ರ ಮಾದರಿಯ ತರಬೇತಿ ನೀಡುತ್ತಿದ್ದ ಸಂಗತಿಯೂ ಒಂದಾಗಿದೆ. ಪರೇಶ್ ಮೇಸ್ತ ಸಾವು ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಗೃಹಸಚಿವರು, ಪರೇಶ್ ತಂದೆ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ. ಮಗನನ್ನು ಕೊಂದು ತಂದು ಹಾಕಿದ್ದಾರೆ ಅಂತ ಹೇಳಿದ್ದಾರೆ. ಪರೇಶ್ ಮೇಸ್ತ ಪ್ರಕರಣದ ಬಗ್ಗೆ ಮತ್ತೆ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ.