Ad Widget .

ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದರೆ ಒಂದು ಸೈಡ್ ಮೀಸೆ ಬೋಳಿಸುತ್ತೇನೆ – ಶಿವನಗೌಡ ನಾಯಕ್

ಸಮಗ್ರ ನ್ಯೂಸ್: ‘ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆಲುವು ಸಾಧಿಸಿದರೆ, ನಾನು ನನ್ನ ಒಂದು ಕಡೆಯ ಮೀಸೆ ಬೋಳಿಸಿಕೊಳ್ಳುತ್ತೇನೆ’ ಎಂದು ದೇವದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಶಿವನಗೌಡ ನಾಯಕ್‍ ಸವಾಲು ಹಾಕಿದ್ದಾರೆ.

Ad Widget . Ad Widget .

ಜನಸಂಕಲ್ಪ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹಗಲುಗನಸು ಕಾಣುತ್ತಿದ್ದಾರೆ. ಅದೇ ಉತ್ಸಾಹದಲ್ಲಿ ಜಿಲ್ಲೆಯಲ್ಲಿ ಏಳು ಸ್ಥಾನಗಳನ್ನು ನಾವೇ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಅವರು ಮೂರು ಸ್ಥಾನಗಳನ್ನು ಗೆಲ್ಲಲ್ಲು ಸಾಧ್ಯವಿಲ್ಲ’ ಎಂದರು.

Ad Widget . Ad Widget .

‘ನಾನು ಪ್ರತಿನಿಧಿಸುವ ಕ್ಷೇತ್ರಕ್ಕೆ ಪರ್ಯಾಯ ಅಭ್ಯರ್ಥಿ ನಿಲ್ಲಿಸಿ ನೀವು ನಿಲ್ಲುವುದು ಬೇಡ ಎಂದರೂ ನಾನು ಪಕ್ಷಕ್ಕಾಗಿ ದುಡಿಯಲಿದ್ದೇನೆ. ನನಗೆ ಯಾವುದೇ ಅಧಿಕಾರ ಬೇಡ. ನನಗೆ ಪಕ್ಷ ಎಲ್ಲವನ್ನು ಕೊಟ್ಟಿದೆ. ಏಳು ಕ್ಷೇತ್ರಗಳಲ್ಲಿಯೂ ಗೆಲುವಿಗೆ ಕೆಲಸ ಮಾಡುತ್ತೇನೆ’ ಎಂದು ಅವರು ತಿಳಿಸಿದರು.

Leave a Comment

Your email address will not be published. Required fields are marked *