Ad Widget .

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ ನೇಮಕ!?

ಸಮಗ್ರ ನ್ಯೂಸ್: ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್‌ 11 ಮತ್ತು 12 ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದು.

Ad Widget . Ad Widget .

ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್‌ ಬಿನ್ನಿ ಅವರು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಲಿದ್ದಾರೆ ಎಂದು ವರದಿಯಾಗಿದೆ.

Ad Widget . Ad Widget .

ಈ ಮೂಲಕ ಬಿನ್ನಿ ಸೌರವ್‌ ಗಂಗೂಲಿ ಅವರ ಸ್ಥಾನವನ್ನು ತುಂಬಲಿದ್ದಾರೆಂದು ಬಿಸಿಸಿಐ ಮೂಲಗಳು ತಿಳಿಸಿವೆ. ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಬಿಸಿಸಿಐನ ಹಾಲಿ ಅಧ್ಯಕ್ಷರಾದ ಸೌರವ್ ಗಂಗೂಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇನ್ನು ರಾಜಿವ್ ಶುಕ್ಲಾ ಬಿಸಿಸಿಐ ಉಪಾಧ್ಯಕ್ಷರಾಗಲಿದ್ದು, ಐಪಿಎಲ್ ಅಧ್ಯಕ್ಷರಾಗಿ ಅರುಣ್ ಧುಮಾಲ್ ಇರಲಿದ್ದಾರೆ. ಖಜಾಂಚಿ ಸ್ಥಾನಕ್ಕೆ ಆಶಿಶ್ ಶೆಲರ್ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಬಿಸಿಸಿಐ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

Leave a Comment

Your email address will not be published. Required fields are marked *