ಸಮಗ್ರ ನ್ಯೂಸ್: ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿದ, ಮಹಿಳೆಯ ವಿರುದ್ದ ಗ್ರಾಮಸ್ಥರು ಆಕ್ರೋಶಗೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೋಕಿನ ಹೆಬ್ಬಲಗುಪ್ಪೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಹೆಬ್ಬಲಗುಪ್ಪೆ ಗ್ರಾಮದಲ್ಲಿ ವಾಸವಾಗಿರುವ ವೆಂಕಟಮ್ಮ ಎಂಬ ಮಹಿಳೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕೆಲವು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ವೆಂಕಟಮ್ಮ ಎಂಬುವವರಿಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಹೆಬ್ಬಲಗುಪ್ಪೆ ಗ್ರಾಮದ ಮಹಿಳಾ ಹೋರಾಟಗಾರ್ತಿ ಜಯಲಕ್ಷಿ ಆರೋಪಿಸಿದ್ದಾರೆ. ಇದಕ್ಕೆ ಗ್ರಾಮಸ್ಥರು ಸಹ ಸಾಥ್ ನೀಡಿದ್ದಾರೆ
ಸರ್ಕಾರಿ ಜಾಗವನ್ನು ರಕ್ಷಣೆ ಮಾಡಬೇಕಾದ ಪಂಚಾಯಿತಿ ಅಧಿಕಾರಿಗಳು ಕೆಲವು ಆಮಿಷಗಳಿಗೆ ಒಳಗಾಗಿ ಈ ಕಾರ್ಯವನ್ನು ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ
ಸರ್ಕಾರಿ ಜಾಗವನ್ನು ಕಬಳಿಸಲು ಹೊಂಚುಹಾಕಿರುವ ತಪ್ಪಿತಸ್ಥರ ವಿರುದ್ದ ಸೂಕ್ತರೀತಿಯ ಕಾನೂನು ಕ್ರಮ ಜರುಗಿಸ ಬೇಕೆಂದು ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.