Ad Widget .

ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವನೆ ತಿರಸ್ಕರಿಸಿದ ಸಿಎಂ

ಸಮಗ್ರ ನ್ಯೂಸ್: ಗ್ರಾಮ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗಜ್ಞಾನೇಂದ್ರ, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಗೃಹಸಚಿವರು ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *