Ad Widget .

ಮಂಗಳೂರು: ಸಲಿಂಗ ರತಿಗೆ ಬಳಸಿಕೊಂಡು ಹಣನೀಡದ ವೃದ್ಧ| ಕತ್ತು ಹಿಸುಕಿ ಕೊಲೆಗೈದ ಯುವಕ

ಸಮಗ್ರ ನ್ಯೂಸ್: ಲೈಂಗಿಕವಾಗಿ ಬಳಸಿಕೊಂಡು 300 ರೂಪಾಯಿ ಹಣ ನೀಡದೇ ನಿರಾಕರಿಸಿದ್ದಕ್ಕಾಗಿ ವೃದ್ಧನನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.

Ad Widget . Ad Widget .

ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್ ಪೂಜಾರಿ(31) ಕೊಲೆ ಆರೋಪಿ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪದವು ಎಂಬಲ್ಲಿನ ಕಿಯೋನಿಕ್ಸ್​ಗೆ ಸೇರಿದ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.

Ad Widget . Ad Widget .

ಕೊಲೆಯಾದ ಜಯಾನಂದ ಆಚಾರ್ಯ ಕೂಲಿ ಕೆಲಸ ಮಾಡುತ್ತಿದ್ದು, ದಸರಾ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದರು. ವಿಪರೀತ ಮದ್ಯದ ಚಟದ ದಾಸರಾಗಿದ್ದ ಇವರು ಯುವಕನೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡು ಕೊಲೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿ ರಾಜೇಶ್ ಪೂಜಾರಿ ನಗರದ ಲಾಲ್​ಬಾಗ್​ನಲ್ಲಿರುವ ಬಾರ್​ನಲ್ಲಿ ಕೆಲಸಗಾರನಾಗಿದ್ದ. ಈತನನ್ನು ವೃದ್ಧ ಜಯಾನಂದ ಆಚಾರ್ಯ ಸಲಿಂಗಕಾಮದ ಉದ್ದೇಶಕ್ಕೆಂದು ಅಕ್ಟೋಬರ್​ 7, 8 ರಂದು ಬಳಸಿಕೊಂಡಿದ್ದರು. ಬಳಿಕ ಹಣ ನೀಡುವುದಾಗಿ ಹೇಳಿದ್ದರಂತೆ. ಆದರೆ, ಸಲಿಂಗಕಾಮದ ಬಳಿಕ 300 ರೂ. ಕೊಡಲು ಜಯಾನಂದ ಆಚಾರ್ಯ ಸತಾಯಿಸಿದ್ದ ಎಂದು ಹೇಳಲಾಗಿದೆ.

ಇದರಿಂದ ಕೋಪಗೊಂಡ ಯುವಕ ರಾಜೇಶ್ ಪೂಜಾರಿ ಹಗ್ಗವೊಂದರಿಂದ ಜಯಾನಂದ ಆಚಾರ್ಯ ಅವರ ಕತ್ತು ಬಿಗಿದು ಕೊಲೆಗೈದಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾವೂರು ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *