ಸಮಗ್ರ ನ್ಯೂಸ್: ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳನ್ನು ಶಾಲೆಗೆ ಸೇರುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು. ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಅವರು ಮಾಹಿತಿ ನೀಡಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಒಂದನೇ ತರಗತಿ ಅಥವಾ ಶಾಲಾ ಶಿಕ್ಷಣಕ್ಕೆ ಪ್ರವೇಶ ಪಡೆಯಲು 6 ವರ್ಷ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಶಿಕ್ಷಣ ತಜ್ಞರ ಸಲಹೆ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.
ಈಗಾಗಲೇ 23 ರಾಜ್ಯಗಳಲ್ಲಿ ಈ ನಿಯಮ ಅಳವಡಿಸಿಕೊಳ್ಳಲಾಗಿದ್ದು, ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯವೆನ್ನುವ ನಿಯಮ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.
ಮಕ್ಕಳ ಬೌದ್ದಿಕ ಸಾಮರ್ಥ್ಯ ಹೆಚ್ಚಿಸಲು 5 ಮತ್ತು 8ನೇ ತರಗತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದ್ದು, ತಜ್ಞರ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.