ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಬಚ್ಚಾ ಎಂದು ಕರೆದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕೆಪಿಸಿಸಿ ವಾಗ್ದಾಳಿ ನಡೆಸಿದೆ.
ಪ್ರಧಾನಿ ಮೋದಿ ಬಿಜೆಪಿಗೆ ಪ್ರಶ್ನಾತೀತರು, ಟೀಕಾತೀತರು ಇರಬಹುದು. ಆದರೆ, ಭಾರತ ಪ್ರಜಾಪ್ರಭುತ್ವದ ದೇಶ ಎಂಬುದನ್ನು ಮರೆಯದಿರಿ’ ಎಂದು ಹೇಳಿದೆ. ‘ಅಂದ ಹಾಗೆ, ನಿಮ್ಮ ಮುಂದಿನ ಬಚ್ಚಾ ಅಮಿತ್ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ? ಮೋದಿಯೂ ನಿಮ್ಮ ಮುಂದೆ ಬಚ್ಚಾ ಅಲ್ಲವೇ’ ಎಂದು ಪ್ರಶ್ನಿಸಿದೆ.
ಪ್ರಧಾನಿ ಮೋದಿ ವಿರುದ್ಧ ಬಚ್ಚಾ ರಾಹುಲ್ ಗಾಂಧಿ ಮಾತನಾಡುತ್ತಿದ್ದಾನೆ ಎಂದು ಯಡಿಯೂರಪ್ಪ ಟೀಕಿಸಿದ್ದರು.
ರಾಯಚೂರು ಜಿಲ್ಲೆಯ ಗಿಲ್ಲೆಸುಗೂರಿನಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ್ದ ಅವರು, ‘ಪ್ರಧಾನಿ ಮೋದಿ ವಿರುದ್ಧ ಮಾತನಾಡುವ ಯೋಗ್ಯತೆ ರಾಹುಲ್‌ಗೆ ಇದೆಯೇ? ಅವರ ಪಾದದ ಅಡಿಯಲ್ಲಿ ಕುಳಿತುಕೊಳ್ಳುವ ಅರ್ಹತೆಯೂ ರಾಹುಲ್‌ಗಿಲ್ಲ. ಮೋದಿಯವರ ನಾಯಕತ್ವವನ್ನು ಜಗತ್ತೇ ಒಪ್ಪಿಕೊಂಡಿದೆ. ಅವರನ್ನು ಬಚ್ಚಾ ರಾಹುಲ್ ಟೀಕಿಸುತ್ತಾನೆ. ಯಾವ ಹಂತಕ್ಕೆ ಕಾಂಗ್ರೆಸ್ ತಲುಪಿದೆ ಎಂಬುದನ್ನು ನೀವೆ ಅರಿಯಿರಿ’ ಎಂದು ಬಿಎಸ್‌ವೈ ವಾಗ್ದಾಳಿ ನಡೆಸಿದ್ದರು.