Ad Widget .

ಮಂಗಳೂರು: ನಿಷೇದಿತ ಪಿಎಫ್ಐ‌ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ.

Ad Widget . Ad Widget .

ಇಂದು(ಅ.13) ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ ಪೊಲೀಸರು ದಾಳಿ ಮಾಡಿದ್ದಾರೆ. ಇನ್ನು ಕೆಲದಿನಗಳ ಹಿಂದೆಯಷ್ಟೇ ದೇಶದಲ್ಲಿ ಪಿಎಫ್ ಐ ನಿಷೇಧ ಮಾಡಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಪಿಎಫ್ ಐ ವಿರುದ್ಧ ರಾಜ್ಯದ ಪೊಲೀಸರು ಮತ್ತೆ ಕಾರ್ಯಾಚರಣೆ ನಡೆಸಿದ್ದಾರೆ.

Leave a Comment

Your email address will not be published. Required fields are marked *