ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ದಿ. ಪುವೀಣ್ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅವರು ಇಂದು (ಗುರುವಾರ) ಬೆಳಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಸ್ವೀಕರಿಸಿದ್ದಾರೆ.

Ad Widget ... ..

ದಿ. ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಕೆಲಸ ಮಾಡಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು.

Ad Widget

ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

Leave a Comment

Your email address will not be published. Required fields are marked *